ಆಧುನಿಕ ಯುಗದಲ್ಲಿ ವಾಣಿಜ್ಯ ಕ್ಷೇತ್ರಕ್ಕೆ ಹೆಚ್ಚು ಬೇಡಿಕೆ : ಸುಮಂತ್ ಕುಮಾರ್ ಜೈನ್ ಅಭಿಪ್ರಾಯ

New Project (6)
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ವಾಣಿಜ್ಯಶಾಸ್ತ್ರ ಎಲ್ಲವನ್ನೂ, ಎಲ್ಲರನ್ನೂ ಒಳಗೊಂಡಿದೆ. ವಾಣಿಜ್ಯಶಾಸ್ತ್ರದ ನೆರವಿಲ್ಲದೆ ಆಧುನಿಕ ಯುಗದಲ್ಲಿ ಬದುಕಲು ಸಾಧ್ಯವಿಲ್ಲ. ಹಿಂದಿಗಿಂತಲೂ ಈಗ ವಾಣಿಜ್ಯ ಕ್ಷೇತ್ರಕ್ಕೆ ಹೆಚ್ಚು ಬೇಡಿಕೆಯಿದೆ ಎಂದು ಎಕ್ಸೆಲ್ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಹೇಳಿದರು.

ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಸೃಷ್ಟಿ 2025- ಫ್ರೆಶರ್ಸ್ ಡೇ, ಓರಿಯಂಟೇಷನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರಾಂಶುಪಾಲ ಡಾ.ನವೀನ್ ಕುಮಾರ್ ಮರಿಕೆ ಮಾತನಾಡಿ, ಉತ್ತಮ ಜ್ಞಾನ ಇರುವ ಶಿಕ್ಷಕ ತನ್ನ ವಿದ್ಯಾರ್ಥಿಗಳನ್ನು ಆ ಮಟ್ಟಕ್ಕೆ ಏರಿಸುತ್ತಾನೆ. ಅಂತಹ ಒಳ್ಳೆಯ ಶಿಕ್ಷಕರು ಎಕ್ಸೆಲ್‌ನಲ್ಲಿದ್ದು ಅವರ ಜ್ಞಾನದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಉಪನ್ಯಾಸಕ ಅರುಣ್ ಕ್ಯಾಸ್ಟಲಿನೋ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ನೀಡಿದರು. ವಾಣಿಜ್ಯ ವಿಭಾಗದ ಡೀನ್ ಸಂತೋಷ್ ಕೆ.ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು.

ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ, ಲೆಕ್ಕಶಾಸ್ತ್ರ ವಿಷಯಗಳಿಗೆ ಸಂಬಂಧಿಸಿದಂತೆ ಪಠ್ಯ ಪೂರಕ ಪುಸ್ತಕ ಅನಾವರಣಗೊಳಿಸಿ ವಿದ್ಯಾರ್ಥಿಗಳಿಗೆ ನೀಡಲಾಯಿತು. ವಾಣಿಜ್ಯ ವಿಭಾಗದ ವಿಭಾಗದ ಮುಖ್ಯಸ್ಥ ಪ್ರಸನ್ನ ಭೋಜ, ಗಣಕ ವಿಜ್ಞಾನ ವಿಭಾಗ ಮುಖ್ಯಸ್ಥ ಪ್ರಭಾಕರ್ ಉಪಸ್ಥಿತರಿದ್ದರು. ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗ ವಿದ್ಯಾರ್ಥಿನಿಯರಾದ ಯಾಣ ಪೊನ್ನಮ್ಮ, ಯುಕ್ತಿ ಗೌಡ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಾದ ಅಭಿಷ್ಟಾ ಸ್ವಾಗತಿಸಿದರು. ದಿಯಾ ವಂದಿಸಿದರು. ಸೃಷ್ಟಿ- ಶೈಕ್ಷಣಿಕ ಮಾಹಿತಿ, ಮನರಂಜನೆ ಆಟ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿಗಳಿಗೆ ಅಭಿನಂದನೆ

ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಸಿಎಸ್‌ಇಇಟಿ ಪರೀಕ್ಷೆಯಲ್ಲಿ ಯಶಸ್ಸು ಗಳಿಸಿದ ನಶ್ವಾನ್ ಪಾಷಾ, ಒಲಂಪಿಯಾಡ್ ಚಿನ್ನದ ಪದಕ ವಿಜೇತರು, 10ನೇ ತರಗತಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net