

ಹಾಸನ: ನಗರದ ಸಾಲಗಾಮೆ ರಸ್ತೆ ಬಳಿ ಇರುವ ಜಿಲ್ಲಾ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಬೆಸ್ಟ್ ಸ್ವತಂತ್ರ ಪದವಿಪೂರ್ವ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ತಾಲೂಕುಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ ಶುಕ್ರವಾರ ನಡೆಯಲಿದೆ ಎಂದು ಹಾಸನಾಂಬ ರೂರಲ್ ಎಜುಕೇಶನ್ ಟ್ರಸ್ ಅಧ್ಯಕ್ಷ ಪಿ.ಎಸ್. ಮಂಜೇಗೌಡ ತಿಳಿಸಿದರು.
ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕ್ರೀಡಾಕೂಟವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಉದ್ಘಾಟಿಸಲಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಸಕ ಎಚ್.ಪಿ. ಸ್ವರೂಪ್, ಸಂಸದ ಪ್ರಜ್ವಲ್ ರೇವಣ್ಣ, ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ಸೂರಜ್ ರೇವಣ್ಣ, ಮಧು ಜಿ. ಮಾದೇಗೌಡ, ನಗರಸಭೆ ಅಧ್ಯಕ್ಷ ಆರ್. ಮೋಹನ್, ಕಾಂಗ್ರೆಸ್ ಮುಖಂಡ ಬನವಾಸೆ ರಂಗಸ್ವಾಮಿ, ಹಾಸನಾಂಬ ರೂರಲ್ ಎಜುಕೇಶನ್ ಟ್ರಸ್ಟ್ ಖಜಾಂಚಿ ಈಶ್ವರಪ್ಪ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಎಂ. ಮಹಾಲಿಂಗಯ್ಯ, ಜನಪ್ರಿಯ ಆಸ್ಪತ್ರೆ ಅಧ್ಯಕ್ಷ ಡಾ. ಅಬ್ದುಲ್ ಬಶೀರ್, ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸಿ.ಕೆ. ಹರೀಶ್, ಚಂಪಲಾಲ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಸಮಾರೋಪ ಸಮಾರಂಭವು ಅದೇ ದಿನ ಸಂಜೆ 3 ಗಂಟೆಗೆ ನಡೆಯಲಿದ್ದು, ಬಹುಮಾನ ವಿತರಣೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಪ್ರೀತಂ ಜೆ. ಗೌಡ, ಶ್ರೀ ಮಂಜುನಾಥ ಸೌಹಾರ್ದ ಸಹಕಾರಿ ಸಂಘದ ಆಡಳಿತಾಧಿಕಾರಿ ಮಲ್ಲೇಶ್ ಗೌಡ, ಶ್ರೀ ಲಕ್ಷ್ಮಿ ಎಂಟರ್ ಪ್ರೈಸಸ್ ಆರ್. ದಿನೇಶ್, ಆರ್. ಯೋಗೇಶ್, ಸಿ.ಪಿ. ವಿಜಯಕುಮಾರ್, ಬೆಸ್ಟ್ ಪ್ರಥಮದರ್ಜೆ ಕಾಲೇಜು ಪ್ರಾಂಶುಪಾಲ ಕೆ.ಸಿ. ನವೀನ್, ಬೆಸ್ಟ್ ಕಾಮರ್ಸ್ ಕಾಲೇಜು ಪ್ರಾಂಶುಪಾಲ ಬಿ. ವಿಕ್ರಂ, ಎಂ.ಡಿ. ನಿತ್ಯಾನಂದ, ಮುರುಳಿ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬೆಸ್ಟ್ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಕೆ.ಸಿ. ನವೀನ್, ಬೆಸ್ಟ್ ಸ್ವತಂತ್ರ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ಆರ್. ಮಧು, ಪುನೀತ್, ದೈಹಿಕ ಶಿಕ್ಷಣ ಉಪನ್ಯಾಸಕ ಮುರುಳಿ ಇತರರು ಉಪಸ್ಥಿತರಿದ್ದರು.