

ಹೆಬ್ರಿ: ಕಡ್ತಲ ಗ್ರಾಮೀಣ ಕಾಂಗ್ರೆಸ್ ಹಾಗೂ ಉದಯ್ ಶೆಟ್ಟಿ ಅಭಿಮಾನಿ ಬಳಗ ಕುಕ್ಕುಜೆ, ಎಳ್ಳಾರೆ ಆಶ್ರಯದಲ್ಲಿ ನಡೆಯಲಿರುವ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ ಸೌಹಾರ್ದ ಟ್ರೋಫಿ 2024-25ರನ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ‌್ಯಕ್ರಮ ಎಳ್ಳಾರೆಯ ಮಹತೋಭಾರ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ನಡೆಯಿತು.
ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ್ ಭಟ್ ಮುನಿಯಾಲು, ಕಡ್ತಲ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಜಗದೀಶ ಹೆಗ್ಡೆ, ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ರಾಘವ ದೇವಾಡಿಗ, ಭೂನ್ಯಾಯ ಮಂಡಳಿ ಸದಸ್ಯ ರಾಘವ ಕುಕ್ಕುಜೆ, ಕಡ್ತಲ ಗ್ರಾಪಂ ಸದಸ್ಯರಾದ ದೀಕ್ಷಿತ್ ಶೆಟ್ಟಿ, ರೇಖಾ ಸತೀಶ್, ಸೌಹಾರ್ದ ಟ್ರೋಫಿ ಕಾರ್ಯಕಾರಿ ಸಮಿತಿ ಅಧ್ಯಕ್ಷ ಸಂಪತ್ ಪೂಜಾರಿ, ಸಮಿತಿ ಸದಸ್ಯರು ಉಪಸ್ಥಿತರಿದ್ದರು.