25ರಿಂದ ಜುಲೈ 4ರ ವರೆಗೆ ನಿಷೇಧಾಜ್ಞೆ

sslc exam
Published on

ಬೆಳಗಾವಿ: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಜೂ. 25ರಿಂದ ಜುಲೈ 4ರ ವರೆಗೆ ನಡೆಯಲಿದ್ದು, ಜಿಲ್ಲೆಯಾದ್ಯಂತ 144ನೇ ಕಲಂ ಅಡಿಯಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ನಿಷೇಧಾಜ್ಞೆ ಹೊರಡಿಸಿದ್ದಾರೆ.

ಪರೀಕ್ಷೆಗಳು ನಡೆಯುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ನಕಲು ಮಾಡುವ ಸಂಭವವಿರುತ್ತದೆ. ಆದ್ದರಿಂದ ಪರೀಕ್ಷೆಯ ಸಮಯದಲ್ಲಿ ಯಾವುದೇ ರೀತಿಯ ಲೋಪದೋಷಗಳಾಗದಂತೆ ಹಾಗೂ ಯಾವುದೇ ರೀತಿಯ ಅವ್ಯವಹಾರಗಳು ಜರುಗದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು.

ಪರೀಕ್ಷೆಯ ಪಾವಿತ್ರ್ಯತೆ ಕಾಯುವ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸಿಆರ್‌ಪಿಸಿ 1973 ಕಲಂ 144ರ ಅಡಿ ನಿಷೇಧಾಜ್ಞೆ ಹೊರಡಿಸಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net