ಬಾಂದಾರ್‌ನಿಂದ ಅಂತರ್ಜಲ ವೃದ್ಧಿ - ಶಾಸಕ ಐಹೊಳೆ

03
Published on

ರಾಯಬಾಗ: ಮತಕ್ಷೇತ್ರದ ಪ್ರತಿಯೊಂದು ಗ್ರಾಮಗಳಲ್ಲಿನ ಹಳ್ಳಗಳಿಗೆ ಬಾಂದಾರ್ ನಿರ್ಮಿಸುವುದರಿಂದ ತೆರೆದ ಬಾವಿ ಮತ್ತು ಕೊಳವೆ ಬಾವಿಗಳಲ್ಲಿ ಅಂತರ್ಜಲ ಹೆಚ್ಚಳವಾಗುತ್ತದೆ ಎಂದು ಶಾಸಕ ಡಿ.ಎಂ. ಐಹೊಳೆ ಹೇಳಿದರು.

ತಾಲೂಕಿನ ನಂದಿಕುರಳಿ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಮಂಜೂರಾದ 1.50 ಕೋಟಿ ರೂ. ವೆಚ್ಚದಲ್ಲಿ ಗ್ರಾಮದ ಹಳ್ಳಕ್ಕೆ ಬ್ಯಾರೇಜ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ನೀರಾವರಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಹೆಚ್ಚಿನ ಅನುದಾನ ತಂದು ಕ್ಷೇತ್ರವನ್ನು ಸಂಪೂರ್ಣ ಅಭಿವೃದ್ಧಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಕೋವಿಡ್-19 ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ ಬಡ ಜನರಿಗೆ, ಕೂಲಿ ಕಾರ್ಮಿಕರಿಗೆ ಹಾಗೂ ರೈತರಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಿದೆ. ಇದರ ಸದುಪಯೋಗ ಎಲ್ಲರೂ ಪಡೆಯಬೇಕು ಎಂದು ಹೇಳಿದರು. ಅಥಣಿ ಸಣ್ಣ ನೀರಾವರಿ ಇಲಾಖೆ ಅಭಿಯಂತ ಎಸ್.ಎಸ್. ಮಾಕಾಣಿ, ವಿಜಯ ವಸ್ತ್ರದ, ಸದಾಶಿವ ಘೋರ್ಪಡೆ, ಆರ್.ಬಿ. ಶಹಾರೆ, ಕಾಡು ಗುಂಡಕಲ್ಲೆ, ಅಮೀತ ಜಾಧವ, ಪೃಥ್ವಿರಾಜ ಜಾಧವ, ಶ್ರವಣ ಕಾಂಬಳೆ, ರಾಮಣ್ಣ ಮಗದುಮ್ಮ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net