ತಿಳಿವಳಿಕೆ ಹೇಳಿದ್ದಕ್ಕೆ ಪದವೀಧರೆ ಆತ್ಮಹತ್ಯೆ

sucide
Published on

ಬೆಳಗಾವಿ: ಮನೆಯಲ್ಲಿ ಕೆಲಸ ಮಾಡು ಎಂದು ಪೋಷಕರು ತಿಳಿವಳಿಕೆ ಹೇಳಿದ್ದಕ್ಕೆ ಮನನೊಂದು ಯುವತಿ ನೇಣು ಬಿಗಿದುಕೊಂಡು ಮಂಗಳವಾರ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬೆಳಗಾವಿ ತಾಲೂಕಿನ ಕೆ.ಕೆ.ಕೊಪ್ಪ ಗ್ರಾಮದ ನೀಲಗಂಗಾ ಗುರುನಾಥ ನೇಸರಗಿ (23) ಮೃತ ಯುವತಿ.

ಬಿಇ ಪದವಿ ಪಡೆದು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಲಾಕ್‌ಡೌನ್‌ನಿಂದಾಗಿ ಕೆಲಸ ಕಳೆದುಕೊಂಡು ಕೆಲಸ ಹುಡುಕುತ್ತಿದ್ದಳು. ಇದರಿಂದ ಅಸಮಾಧಾನಗೊಂಡ ಪೋಷಕರು, ಮನೆಕೆಲಸ ಮಾಡು ಎಂದು ಬುದ್ಧಿವಾದ ಹೇಳಿದ್ದರು. ಹೀಗಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತಳ ತಾಯಿ ಕಲಾವತಿ ನೇಸರಗಿ ದೂರಿನಲ್ಲಿ ತಿಳಿಸಿದ್ದಾರೆ.

ಈ ಕುರಿತು ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net