ಶಿಕ್ಷಣದಿಂದ ಪ್ರತಿ ಸಮಸ್ಯೆಗೆ ಪರಿಹಾರ

19Manju11
ಬೆಳಗಾವಿ ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮವನ್ನು ಎಡಿಸಿ ವಿಜಯಕುಮಾರ ಹೊನಕೇರಿ ಉದ್ಘಾಟಿಸಿದರು. ಪ್ರೊ.ವೈ.ಎಂ.ಭಜಂತ್ರಿ, ರಾಚಿ ಭಜಂತ್ರಿ, ಮಲ್ಲಪ್ಪ ಭಜಂತ್ರಿ ಇತರರಿದ್ದರು.
Published on

ಬೆಳಗಾವಿ: ಯುವಜನರು ಸ್ಪರ್ಧಾತ್ಮಕ ಯುಗದಲ್ಲಿ ಉತ್ತಮ ಶಿಕ್ಷಣ ಪಡೆಯುವ ಜತೆಗೆ ಸಮಾಜದಲ್ಲಿ ಸಾಮರಸ್ಯದ ಬದುಕು ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಹೇಳಿದರು.

ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಸೋಮವಾರ ನುಲಿಯ ಚಂದಯ್ಯ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, ಜಯಂತಿಗಳು ಕೇವಲ ಒಂದು ವರ್ಗಕ್ಕೆ ಮಾತ್ರ ಸೀಮಿತವಾಗಿರದೆ ಸಮಾಜಕ್ಕೆ ಮಾದರಿಯಾಗಬೇಕು. ಪ್ರತಿಯೊಂದು ಸಮಸ್ಯೆಗಳಿಗೆ ಶಿಕ್ಷಣದಿಂದ ಪರಿಹಾರ ನೀಡಲು ಸಾಧ್ಯವಿದೆ. ಸಮಾಜದವರು ಮೂಲ ವೃತ್ತಿ ಜತೆಗೆ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದರು.

ನುಲಿಯ ಚಂದಯ್ಯ ಆಚಾರ-ವಿಚಾರಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಸಧೃಢರಾಗಬೇಕು. ಸರ್ಕಾರಗಳು ಪ್ರತಿಯೊಂದು ಸಮುದಾಯದ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು ಸದುಪಯೋಗ ಪಡೆಯಬೇಕು. ಒಗ್ಗಟ್ಟಿನಿಂದ ಸಮಾಜವನ್ನು ಕಟ್ಟಿ ಸಮಾಜಕ್ಕೆ ಒಳ್ಳೆಯ ಕೊಡುಗೆ ನೀಡಬೇಕು ಎಂದು ತಿಳಿಸಿದರು.

ಪ್ರೊ.ವೈ.ಎಂ.ಭಜಂತ್ರಿ, ರಾಚಿ ಭಜಂತ್ರಿ, ಮಲ್ಲಪ್ಪ ಭಜಂತ್ರಿ, ಶಂಕರ ಭಜಂತ್ರಿ, ಮುತ್ತಪ್ಪ ಭಜಂತ್ರಿ, ರಾಜು ಭಜಂತ್ರಿ, ರಾಮಜಿ ಭಜಂತ್ರಿ, ಬಸವರಾಜ ಭಜಂತ್ರಿ, ಅಶೋಕ ಸುಳೆಬಾವಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net