ವಲಸಿಗರಿಂದ ಪೋಲಿಯೋ ಹರಡುವ ಸಾಧ್ಯತೆ - ಡಾ. ಅಪ್ಪಾಸಾಹೇಬ ನರಟ್ಟಿ

01010101
Published on

ಬೆಳಗಾವಿ: ಪೋಲಿಯೋ ಮುಕ್ತ ರಾಷ್ಟ್ರವೆಂದು ವಿಶ್ವ ಅರೋಗ್ಯ ಸಂಸ್ಥೆಯಿಂದ ಭಾರತ ಪ್ರಮಾಣ ಪತ್ರ ಪಡೆದುಕೊಂಡಿದ್ದರೂ ನೆರೆ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಪ್ಘಾನಿಸ್ಥಾನಗಳಲ್ಲಿ ಪೋಲಿಯೋ ಪ್ರಕರಣಗಳು ಕಂಡು ಬಂದಿರುವುದರಿಂದ ವಲಸಿಗರ ಮೂಲಕ ನಮ್ಮ ದೇಶಕ್ಕೆ ಹರಡುವ ಸಾಧ್ಯತೆ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಭಾಗೀಯ ಸಹನಿರ್ದೇಶಕ ಡಾ. ಅಪ್ಪಾಸಾಹೇಬ ನರಟ್ಟಿ ಆತಂಕ ವ್ಯಕ್ತಪಡಿಸಿದ್ದಾರೆ.

ರಾಷ್ಟೀಯ ಆರೋಗ್ಯ ಅಭಿಯಾನ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರ ಆರೋಗ್ಯ ಕೇಂದ್ರ ವಡಗಾವಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶಶಿಕಾಂತ ಮುನ್ಯಾಳ ಅಧ್ಯಕ್ಷತೆ ವಹಿಸಿದ್ದರು. ಪಾಲಿಕೆ ಆಯುಕ್ತ ಜಗದೀಶ ಕೆ.ಎಚ್., ರೋಟರಿ ಕ್ಲಬ್ ಆಪ್ ಬೆಳಗಾಂ ಸೌತ್‌ನ ಜಯಸಿಂಹ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ.ಎಸ್.ರೊಟ್ಟಿ, ಡಾ.ಐ.ಪಿ ಗಡಾದ, ಡಾ.ಪ್ರಕಾಶ ವಾಲಿ ಸೇರಿದಂತೆ ಇತರರು ಇದ್ದರು.

ಪ್ರೇಮಾ ಜಡಗಿ, ಅಂಗನವಾಡಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಪಿ.ಯಲಿಗಾರ ಸ್ವಾಗತಿಸಿದರು. ಡಾ.ಸಂಜಯ ಡುಮ್ಮಗೊಳ ವಂದಿಸಿದರು.  ಸಿ.ಜಿ ಅಗ್ನಿಹೋತ್ರಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net