

ಮಸ್ಕಿ: ಜೈನ ಧರ್ಮ ಸತ್ಯ ಮತ್ತು ಅಹಿಂಸೆಯನ್ನು ಪ್ರತಿಪಾದಿಸುತ್ತ ಬಂದಿದ್ದು, ಮನುಕುಲಕ್ಕೆ ಮಾದರಿಯಾಗಿದೆ ಎಂದು ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ ಹೇಳಿದರು.
ಪಟ್ಟಣದ ಪುರಸಭೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಪುರಸಭೆ ಉಪಾಧ್ಯಕ್ಷೆ ಗೀತಾ ಶಿವರಾಜ ಬುಕ್ಕಣ್ಣನವರ, ಮುಖ್ಯಾಧಿಕಾರಿ ನರಸರಡ್ಡಿ, ವ್ಯವಸ್ಥಾಪಕ ಸತ್ಯನಾರಾಯಣ ಇತರರಿದ್ದರು.
ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಡಾ.ಮಲ್ಲಪ್ಪ ಕೆ.ಯರಗೋಳ ಅವರು ಮಹಾವೀರ ಭಾವಚಿತ್ರಕ್ಕೆ ಪಷ್ಪ ನಮನ ಸಲ್ಲಿಸಿದರು. ಪಟ್ಟಣದ ವಿವಿಧ ಶಾಲಾ ಕಾಲೇಜುಗಳಲ್ಲಿ ಮಹಾವೀರ ಜಯಂತಿ ಆಚರಿಸಲಾಯಿತು.