ಸಾಹಿತ್ಯ, ಸಂಗೀತದಿಂದ ಸಂಸ್ಕಾರಯುತ ಬದುಕ

17Huk1
Published on

ಹುಕ್ಕೇರಿ: ಕನ್ನಡ ನಾಡು, ನುಡಿಗಾಗಿ ಸದಾ ಶ್ರಮಿಸುವ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯರು ೆ.23ರಂದು ಯಮಕನಮರಡಿಯಲ್ಲಿ ಜರುಗಲಿರುವ 12ನೇ ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಸಂತಸವಾಗಿದೆ ಎಂದು ಬೆಂಗಳೂರು ಭವಾನಿ ದತ್ತಪೀಠದ ವೇದಾಂತಚಾರ್ಯ ಮಂಜುನಾಥ ಭಾರತಿ ಸ್ವಾಮೀಜಿ ಹೇಳಿದರು.

ಇಲ್ಲಿನ ಹುಕ್ಕೇರಿ ಹಿರೇಮಠದಲ್ಲಿ ಭಾನುವಾರ ಹಮ್ಮಿಕೊಂಡಿದ್ದ 12ನೇ ತಾಲೂಕು ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಹಿತ್ಯ ಸಮ್ಮೇಳನ ಭಾಷೆ, ಜಾತಿ, ಧರ್ಮ ಪಂತ ಬೇಧ ಮರೆತು ಸೀಮಾತೀತವಾಗಿದೆ. ಸಾಹಿತ್ಯ, ಸಂಗೀತ ಮತ್ತು ಜೀವನ ಇವು ಅವಿನಾಭಾವ ಸಂಬಂಧ ಹೊಂದಿವೆ. ಸಾಹಿತ್ಯ ಮತ್ತು ಸಂಗೀತದಿಂದ ಬದುಕು ಸಂಸ್ಕಾರಯುತವಾಗುತ್ತದೆ ಎಂದರು.

ಸಮ್ಮೇಳನದ ಸರ್ವಾಧ್ಯಕ್ಷ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಕನ್ನಡದ ಸಾಹಿತಿಗಳಿಗೆ ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಲಭಿಸಿರುವುದು ಹೆಮ್ಮೆಯ ಸಂಗತಿ. ಗಡಿಭಾಗ ಯಮಕನಮರಡಿಯಲ್ಲಿ ಸಮ್ಮೇಳನ ಆಯೋಜಿಸಿರುವುದು ಕನ್ನಡತನಕ್ಕೆ ಮತ್ತಷ್ಟು ಮೆರಗು ತಂದಿದೆ ಎಂದು ತಿಳಿಸಿದರು.

ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಕಿರಣಸಿಂಗ್ ರಜಪೂತ ಮಾತನಾಡಿ, ಗಡಿ ಪ್ರದೇಶದಲ್ಲಿ ಸಮ್ಮೇಳನ ಆಯೋಜಿಸುವ ಮೂಲಕ ಗ್ರಾಮೀಣ ಪ್ರದೇಶದ ಎಲೆಮರೆಯ ಕಾಯಿಯಂತಿರುವ ಸಾಹಿತಿಗಳನ್ನು ಪರಿಚಯಿಸುವ ಸಂಕಲ್ಪ ನಮ್ಮದಾಗಿದೆ ಎಂದರು.

ಕಸಾಪ ತಾಲೂಕಾಧ್ಯಕ್ಷ ಪ್ರಕಾಶ ಅವಲಕ್ಕಿ ಮಾತನಾಡಿದರು. ಸ್ವಾಗತ ಸಮಿತಿ ಉಪಾಧ್ಯಕ್ಷ ಈರಣ್ಣ ಬಿಸಿರೊಟ್ಟಿ, ಕಾರ್ಯದರ್ಶಿ ರವಿ ಜಿಂಡ್ರಾಳಿ, ಕಸಾಪ ಪದಾಕಾರಿಗಳಾದ ಸುಭಾಸ ಗಸ್ತಿ, ಎಂ.ಎಸ್.ಹೊಳಿಮಠ, ಮಂಜುಳಾ ಅಡಕೆ ಇತರರಿದ್ದರು. ಸಿ.ಎಂ.ದರಬಾರೆ ನಿರೂಪಿಸಿದರು.

ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ನನ್ನ ಕ್ಷೇತ್ರದಲ್ಲಿ ಆಯೋಜಿಸಿರುವುದು ಸಂತಸ ತಂದಿದೆ. ಕನ್ನಡ ನಾಡಿನ ಹಲವಾರು ಪ್ರತಿಭೆಗಳನ್ನು ಮುಖ್ಯ ವಾಹಿನಿಗೆ ತರುವಲ್ಲಿ ನಾವು ಎರಡು ದಶಕಗಳಿಂದ ಶ್ರಮಿಸುತ್ತಿದ್ದೇವೆ.

ಸತೀಶ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net