

ಚಳ್ಳಕೆರೆ: ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಚಿತ್ರದುರ್ಗ ಮಡಿವಾಳ ಮಠದ ಶ್ರೀ ಬಸವ ಮಾಚಿದೇವ ಸ್ವಾಮೀಜಿ ನೇತೃತ್ವದಲ್ಲಿ ಮನ-ಮನೆ ಮಾಚಿದೇವ ಕಾರ್ಯಕ್ರಮವನ್ನು ಆ.16ರ ಮಂಗಳವಾರ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕಾಧ್ಯಕ್ಷ ಎನ್.ಮಂಜುನಾಥ ತಿಳಿಸಿದ್ದಾರೆ.
ನಗರದ ಚೇಂಬರ್ ಆಫ್ ಕಾಮರ್ಸ್ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 10ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮ ಬಳಿಕ 30 ದಿನಗಳ ಕಾಲ ಮೂವತ್ತು ತಾಲೂಕು ಕೇಂದ್ರಗಳಲ್ಲಿ ಮನೆ ಮನೆಗೆ ಸ್ವಾಮೀಜಿ ಭೇಟಿ ಮಾಡಿ, ಸಾಮಾಜಿಕ ಸಂಘಟನೆಗೆ ಸಮಾಜವನ್ನು ಒಗ್ಗೂಡಿಸಲಿದ್ದಾರೆ ಎಂದು ತಿಳಿಸಿದ್ದಾರೆ.