

ಸವದತ್ತಿ: ಅಸಂಘಟಿತ ಕಾರ್ಮಿಕರು ಎಲ್ಲ ಕ್ಷೇತ್ರಗಳಲ್ಲಿಯೂ ಇದ್ದಾರೆ. ಭಾರತವು ಹಳ್ಳಿಗಳ ದೇಶ ಆಗಿರುವುದರಿಂದ ಕಷಿ ಕಾರ್ಮಿಕರೂ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇವರೆಲ್ಲರಿಗೆ ಒಂದು ಗೌರವದ ಮತ್ತು ಉತ್ತಮ ಬದುಕು ನಡೆಸಲು ಮನರೇಗಾ ಬಹಳ ಉಪಯುಕ್ತ ಎಂದು ಧಾರವಾಡದ ಸಿಎಂಡಿಆರ್ ಸಂಸ್ಥೆಯ ನಿರ್ದೇಶಕ ಡಾ.ಬಸವಪ್ರಭು ಜಿರಳಿ ಹೇಳಿದರು.
ಪಟ್ಟಣದ ಕೆಎಲ್‌ಇ ಸಂಸ್ಥೆಯ ಎಸ್‌ವಿಎಸ್ ಬೆಳ್ಳುಬ್ಬಿ ಮಹಾವಿದ್ಯಾಲಯದ ಅರ್ಥಶಾಸ ವಿಭಾಗ ಮತ್ತು ಧಾರವಾಡದ ಸಿಎಂಡಿಆರ್ ಸಂಸ್ಥೆಯ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಸಂಘಟಿತ ಕಾರ್ಮಿಕರ ಸಮಸ್ಯೆಗಳು ಮತ್ತು ಸವಾಲುಗಳು ವಿಷಯದ ಮೇಲಿನ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯಿದೆಯಿಂದ ಬಹಳಷ್ಟು ಕಾರ್ಮಿಕರಿಗೆ ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ಸಿಕ್ಕಿದೆ ಎಂದರು.
ದಾವಣಗೆರೆ ವಿಶ್ವವಿದ್ಯಾಲಯದ ಅರ್ಥಶಾಸ ವಿಭಾಗದ ಪ್ರಾಧ್ಯಾಪಕ ಡಾ.ರಂಗಪ್ಪ ಕೆ.ಬಿ. ಮಾತನಾಡಿ, ದೇಶದಲ್ಲಿ ಅಸಂಘಟಿತ ಕಾರ್ಮಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಇದು ತಂತ್ರಜ್ಞಾನದ ಬೆಳವಣಿಗೆಯಿಂದ ಆಗಿರುವ ಬದಲಾವಣೆ ಎಂದು ಬೇಸರ ವ್ಯಕ್ತಪಡಿಸಿದರು.
ವಿಜಯಕುಮಾರ ಮೀಶಿ ಪ್ರಾಸ್ತಾವಿಕ ಮಾತನಾಡಿದರು. ಪ್ರಾಚಾರ್ಯ ಡಾ. ಎನ್.ಆರ್. ಸವತಿಕರ ಅಧ್ಯಕ್ಷತೆ ವಹಿಸಿದ್ದರು.
ಸರಸ್ವತಿ ಮಾದರ, ಎ.ಎ. ಹಳ್ಳೂರ, ಡಾ.ಎನ್.ಎ. ಕೌಜಗೇರಿ, ಹಳೆಯ ವಿದ್ಯಾರ್ಥಿ ಸಂಘದ ಸದಸ್ಯ ಮತ್ತು ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಲಿಂಗರಾಜ ಅಂಗಡಿ, ಪ್ರೊ. ಕೆ.ರಾಮರೆಡ್ಡಿ, ಡಾ.ಎ.ಎ್.ಬದಾಮಿ, ಪ್ರೊ. ಮೋಹನ್.ಬಿ., ಪ್ರೊ. ಯಶೋದಾ.ಡಿ., ಕೆ.ಬಿ. ನರಗುಂದ, ಎಸ್.ಜೆ. ಮಜ್ಜಗಿ, ಚೈತ್ರಾ ಸುಳ್ಳದ, ಎಂ.ಸಿ. ಹಾದಿಮನಿ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ವಿವಿಧ ರಾಜ್ಯಗಳಿಂದ, ಜಿಲ್ಲೆಗಳಿಂದ 120 ಪ್ರತಿನಿಧಿಗಳು ಭಾಗವಹಿಸಿದ್ದರು.