ಸಾಮೂಹಿಕ ವಿವಾಹದಿಂದ ಸಾಮರಸ್ಯ

HDL Marreiage
ಹೂವಿನಹಡಗಲಿ ತಾಲೂಕಿನ ಕುರುವತ್ತಿಯಲ್ಲಿ ಶುಕ್ರವಾರ ಸಾಮೂಹಿಕ ವಿವಾಹ ಜರುಗಿತು.
Published on

ಹೂವಿನಹಡಗಲಿ: ಸಾಮೂಹಿಕ ವಿವಾಹ ಜಾತಿ, ಧರ್ಮಗಳ ಬೇಲಿಯನ್ನು ದಾಟಿ ಎಲ್ಲರಲ್ಲೂ ಸಾಮರಸ್ಯ ಭಾವನೆ ಮೂಡಿಸಲು ಸಹಕಾರಿಯಾಗಿದೆ ಎಂದು ಮಾನಿಹಳ್ಳಿಯ ಡಾ.ಮಳೆಯೋಗೀಶ್ವರ ಸ್ವಾಮೀಜಿ ಹೇಳಿದರು.

ತಾಲೂಕಿನ ಸುಕ್ಷೇತ್ರ ಕುರುವತ್ತಿಯಲ್ಲಿ ಹಿರೇಮಠದ ಸಿದ್ಧನಂದೀಶ್ವರ ಶ್ರೀಗಳ 17ನೇ ವರ್ಷದ ಪಟ್ಟಾಧಿಕಾರ ವರ್ಧಂತಿ ಮಹೋತ್ಸವದ ಅಂಗವಾಗಿ ಶುಕ್ರವಾರ ಏರ್ಪಡಿಸಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಮಾತನಾಡಿದರು. ಬಡವರ ಪಾಲಿಗೆ ವರದಾನವಾಗಿರುವ ಸಾಮೂಹಿಕ ವಿವಾಹ ಎಲ್ಲರನ್ನೂ ಸಹಬಾಳ್ವೆಯನ್ನು ಕಲಿಸುತ್ತದೆ. ದಾಂಪತ್ಯ ಜೀವನ ಆರಂಭಿಸುತ್ತಿರುವ ನವ ಜೋಡಿಗಲು ಹಿರಿಯರನ್ನು ಗೌರವದಿಂದ ಕಾಣಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಸತ್ಪ್ರಜೆಯನ್ನಾಗಿಸಬೇಕು ಎಂದರು.

ಬನ್ನಿಕೊಪ್ಪ ಹಿರೇಮಠದ ಡಾ.ಸುಜ್ಞಾನ ಸ್ವಾಮೀಜಿ ಮಾತನಾಡಿದರು. ಸಿದ್ದಾಪುರ ಮಠದ ಪಶುಪತಿ ಶಿವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಏಳು ನವಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net