ಮೋದಿಯಿಂದ ಬಿಜೆಪಿ ಮತ್ತೆ ಅಧಿಕಾರಕ್ಕೆ

30..3
ಗೋಕಾಕ ನಗರದಲ್ಲಿ ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಮೃತ ಕಲಶದೊಂದಿಗೆ ದೆಹಲಿಗೆ ಹೊರಟ ಕಾರ್ಯಕರ್ತರನ್ನು ಬೀಳ್ಕೊಟ್ಟರು. ಸುಭಾಸ ಪಾಟೀಲ, ಬಿ.ಡಿ.ಪಾಟೀಲ, ಸಿದ್ಧಲಿಂಗ ಕಂಬಳಿ, ಮುತ್ತೆನಗೌಡ ಪಾಟೀಲ ಇತರರಿದ್ದರು.
Published on

ಗೋಕಾಕ: ನನ್ನ ಮಣ್ಣು ನನ್ನ ದೇಶ ಅಭಿಯಾನವು ಏಕ್ ಭಾರತ-ಶ್ರೇಷ್ಠ ಭಾರತ ದೃಷ್ಟಿಕೋನ ಸಾಕಾರಗೊಳಿಸುತ್ತದೆ ಎಂದು ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.


ನಗರದಲ್ಲಿ ನನ್ನ ಮಣ್ಣು ನನ್ನ ದೇಶ ಅಭಿಯಾನ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಅಮೃತ ಕಲಶದೊಂದಿಗೆ ದೆಹಲಿ ಹೊರಟ ಕಾರ್ಯಕರ್ತರನ್ನು ಭಾನುವಾರ ಬೀಳ್ಕೊಟ್ಟು ಮಾತನಾಡಿದ ಅವರು, ಅಭಿಯಾನ ಮೂಲಕ ನಮ್ಮ ಹೆಮ್ಮೆಯ ವೀರ ಯೋಧರಿಗೆ ಗೌರವ ಸಮರ್ಪಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.


ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನನ್ನ ಮಣ್ಣು, ನನ್ನ ದೇಶ ಅಭಿಯಾನವು ನಮ್ಮ ದೇಶದ ಏಕತೆ ಹಾಗೂ ಸಮಗ್ರತೆಯ ಭಾವನೆಗಳನ್ನು ಮತ್ತಷ್ಟು ಬಲವರ್ಧನೆಗೊಳಿಸಲಿದೆ ಎಂದು ತಿಳಿಸಿದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಸಾರಥ್ಯದಲ್ಲಿ ಮತ್ತೊಂದು ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಮೋದಿ ಅವರಂತಹ ದಿಟ್ಟ ಪ್ರಧಾನಿ ದೇಶಕ್ಕೆ ಅವಶ್ಯ ಎಂದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಡಿ.ಪಾಟೀಲ, ಪ್ರಭಾ ಶುಗರ್ಸ್ ನಿರ್ದೇಶಕ ಸಿದ್ಧಲಿಂಗ ಕಂಬಳಿ, ಮುತ್ತೆನಗೌಡ ಪಾಟೀಲ, ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ ಸೇರಿ ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net