

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ಸುವರ್ಣ ಸಂಭ್ರಮ 50 ರ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಧಾರವಾಡ ರಂಗಾಯಣ ಆಶ್ರಯದಲ್ಲಿ ಬಾಗಲಕೋಟ ಜಿಲ್ಲೆಯ ಇಳಕಲ್ನಲ್ಲಿ ಸೆ. 2, 3ರಂದು ರಂಗ ಶ್ರಾವಣ ನಾಟಕೋತ್ಸವ ಏರ್ಪಡಿಸಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಡಗಿ ಕಾರ್ಯಕ್ರಮ ಉದ್ಘಾಟಿಸುವರು. ಚಿತ್ತರಗಿ ಶ್ರೀ ವಿಜಯಮಹಾಂತೇಶ ಸಂಸ್ಥಾನ ಮಠದ ಶ್ರೀ ಗುರುಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಧಾರವಾಡ ರಂಗಾಯಣ ನಿರ್ದೇಶಕ ಡಾ. ರಾಜು ತಾಳಿಕೋಟಿ, ದಾವಣಗೆರೆ ವೃತ್ತಿ ರಂಗಭೂಮಿ ರಂಗಾಯಣ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ, ಬೆಳಗಾವಿ ವಿಭಾಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಕೆ.ಎಚ್ ಚೆನ್ನೂರ ಅತಿಥಿಗಳಾಗಿ ಆಗಮಿಸುವರು. ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ರಂಗ ಸಮಾಜದ ಸದಸ್ಯರಾದ ಶಶಿಧರ ಬಾರಿಘಾಟ್, ರಾಜಪ್ಪ ದಳವಾಯಿ, ಡಾ. ಕೆ.ಎಚ್. ರಾಮಕೃಷ್ಣಯ್ಯ, ಎಚ್.ಎಸ್. ಸುರೇಶಬಾಬು, ಡಿಂಗ್ರಿ ನರೇಶ, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಪ್ರೊ. ಕೆ.ಎ.ಬನ್ನಟ್ಟಿ ಉಪಸ್ಥಿತಿ ವಹಿಸುವರು ಎಂದು ಆಡಳಿತಾಧಿಕಾರಿ ಶಶಿಕಲಾ ಹುಡೇದ ತಿಳಿಸಿದ್ದಾರೆ.