ಶಿಕ್ಷಕರಿಂದ ವಿದ್ಯಾರ್ಥಿಗಳ ಭವಿಷ್ಯ ಉಜ್ವಲ

18 LNG 01
ಲಿಂಗಸುಗೂರು ವಿಜಯ ಮಹಾಂತೇಶ್ವರ ಶಾಖಾನುಭವ ಮಂಟಪದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಮಾನಪ್ಪ ವಜ್ಜಲ್ ಉದ್ಘಾಟಿಸಿದರು. ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಸನಗೌಡ ಮೇಟಿ, ಡಿಡಿಪಿಐ ಕೆ.ಡಿ.ಬಡಿಗೇರ, ತಹಸೀಲ್ದಾರ್ ಶಂಶಾಲಂ, ಬಿಇಒ ಹುಂಬಣ್ಣ ರಾಠೋಡ್, ಕ್ಷೇತ್ರ ಸಮನ್ವಯಾಧಿಕಾರಿ ಹನುಮಂತಪ್ಪ ಕುಳಗೇರಿ, ದೈಹಿಕ ಶಿಕ್ಷಣ ವಿಷಯ ಪರಿವೀಕ್ಷಕ ಚನ್ನಬಸವರಾಜ ಮೇಟಿ ಇತರರಿದ್ದರು.
Published on

ವಿಜಯವಾಣಿ ಸುದ್ದಿಜಾಲ ಲಿಂಗಸುಗೂರು
ಸಮಾಜದಲ್ಲಿ ಶಿಕ್ಷಕರು ತಮ್ಮದೇ ಆದ ಗೌರವ ಹೊಂದಿದ್ದಾರೆ ಎಂದು ಶಾಸಕ ಮಾನಪ್ಪ ವಜ್ಜಲ್ ಹೇಳಿದರು.

ಪಟ್ಟಣದ ಮಹಾಂತೇಶ್ವರ ಶಾಖಾನುಭವ ಮಂಟಪದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ, ತಾಲೂಕು ಮಟ್ಟದ ಕ್ರೀಡಾಕೂಟ ಹಾಗೂ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಿಲ್ಪಿಗಳು ಕಲ್ಲನ್ನು ಕಟೆದು ಹೇಗೆ ಸುಂದರ ಮೂರ್ತಿ ರೂಪಿಸುತ್ತಾರೋ, ಅದೇರೀತಿ ಶಿಕ್ಷಕರು ಕೂಡ ಮಕ್ಕಳನ್ನು ತಿದ್ದಿತೀಡಿ ಗುಣಮಟ್ಟದ ಶಿಕ್ಷಣ ನೀಡಿದರೆ ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪುಗೊಳ್ಳಲು ಸಾಧ್ಯವಾಗಲಿದೆ. ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂದು ನುಡಿಯಂತೆ ಗುರುವಿಲ್ಲದೆ ಯಾರೂ ಕೂಡ ಉನ್ನತ ಸಾಧನೆ ಮಾಡಲು ಸಾಧ್ಯವಿಲ್ಲ.

ಡಾ.ಎಸ್.ರಾಧಾಕೃಷ್ಣನ್ ಅವರು ಉತ್ತಮ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ದೇಶದ ಉಪರಾಷ್ಟ್ರಪತಿಗಳಾಗಿ, ರಾಷ್ಟ್ರಪತಿಗಳಾಗಿ ಅತ್ಯುನ್ನತ ಸ್ಥಾನ ಹೊಂದಿದ್ದರೂ ತಮ್ಮ ಜನ್ಮದಿನವನ್ನು ಶಿಕ್ಷಕರ ದಿನಾಚರಣೆ ಎಂದು ಆಚರಿಸುವ ಮೂಲಕ ಶಿಕ್ಷಕರ ವೃತ್ತಿಯ ಗೌರವ ಹೆಚ್ಚಿಸಿದ್ದಾರೆ. ಶೈಕ್ಷಣಿಕ, ಸಾಮಾಜಿಕ, ರಾಜಕೀಯ, ಔದ್ಯೋಗಿಕವಾಗಿ ಅಭಿವೃದ್ಧಿ ಹೊಂದಲು ಶಿಕ್ಷಕರ ಪಾತ್ರ ಅಪಾರವಾಗಿದೆ ಎಂದರು.

ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಹಾಜಿಬಾಬು ಕಲ್ಯಾಣಿ, ಪ್ರೌಢ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಪ್ರಭುಲಿಂಗ ಗದ್ದಿ, ಶಿಕ್ಷಕರಾದ ಬಸಪ್ಪ ಹಂದ್ರಾಳ, ಚನ್ನಪ್ಪ ರಾಠೋಡ್, ಗುರುಸಂಗಯ್ಯ ಗಣಾಚಾರಿ, ಅಮರಪ್ಪ ಸಾಲಿ, ಜಿತೇಂದ್ರ ಗುತ್ತೇದಾರ್, ಅಮರಯ್ಯ ಸೊಪ್ಪಿಮಠ, ಅಮರೇಶ ನಾಡಗೌಡ, ಮಲ್ಲಿಕಾರ್ಜುನ ಗೌಡೂರು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net