ಬೂತ್ ಮಟ್ಟದಿಂದ ಪಕ್ಷ ಸಂಘಟಿಸಲಿ

web2
ರಾಯಬಾಗ ಪಟ್ಟಣದ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆ ಸಭಾಂಗಣದಲ್ಲಿ ಏರ್ಪಡಿಸಿದ್ದ ರಾಯಬಾಗ ಬಿಜೆಪಿ ಮಂಡಲ ಕಾರ್ಯಕಾರಿಣಿ ಸಭೆಯಲ್ಲಿ ಶಾಸಕ ಡಿ.ಎಂ.ಐಹೊಳೆ ಮಾತನಾಡಿದರು. ಪೃಥ್ವಿರಾಜ ಜಾಧವ, ದುಂಡಪ್ಪ ಭೆಂಡವಾಡೆ ಇತರರಿದ್ದರು.
Published on

ರಾಯಬಾಗ: ಪದಾಧಿಕಾರಿಗಳು ಬಿಜೆಪಿಯನ್ನು ಬಲಿಷ್ಠವಾಗಿ ಕಟ್ಟಲು ಬೂತ್ ಮಟ್ಟದಿಂದ ಸಂಘಟಿತರಾಗಬೇಕೆಂದು ಶಾಸಕ ಡಿ.ಎಂ.ಐಹೊಳೆ ಹೇಳಿದರು.

ಪಟ್ಟಣದ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ರಾಯಬಾಗ ಬಿಜೆಪಿ ಮಂಡಲ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿ, ಮುಂಬರುವ ಜಿಪಂ, ತಾಪಂ ಚುನಾವಣೆಯನ್ನು ಎಲ್ಲರೂ ಒಗ್ಗಟ್ಟಿನಿಂದ ಎದುರಿಸಬೇಕು. ರಾಜ್ಯ ಸರ್ಕಾರ ನಿಗಮಗಳ ಹಣವನ್ನು ಗ್ಯಾರಂಟಿ ಮತ್ತು ಚುನಾವಣೆಗೆ ಬಳಸಿಕೊಂಡಿರುವುದು ನಾಚಿಕೆಗೇಡು. ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸಿಎಂ ಸಿದ್ದರಾಮಯ್ಯ ತಮ್ಮ ಪತ್ನಿ ಹೆಸರಲ್ಲಿ 14 ನಿವೇಶನ ಪಡೆದುಕೊಂಡು ಈಗ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದರು.

ರಾಯಬಾಗ ಬಿಜೆಪಿ ಮಂಡಲ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಿಸಲಾಯಿತು. ಮಂಡಲ ಅಧ್ಯಕ್ಷ ಪೃಥ್ವಿರಾಜ ಜಾಧವ, ದುಂಡಪ್ಪ ಭೆಂಡವಾಡೆ, ರಾಜಶೇಖರ ಖನದಾಳೆ, ಅಪ್ಪಾಸಾಬ ಬ್ಯಾಕೂಡೆ, ಸದಾನಂದ ಹಳಿಂಗಳಿ, ಬಸವರಾಜ ಡೋಣವಾಡೆ, ವಿಜಯ ಕೋಟಿವಾಲೆ, ರಾಜು ಹರಗನ್ನವರ, ಮಹಾನಿಂಗ ಹಂಜಿ, ರಮೇಶ ಕಾಳನ್ನವರ, ಭಾರತಿ ಲೋಹಾರ, ಅಮಿತ ಜಾಧವ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net