ಬೂತ್ ಮಟ್ಟದಿಂದ ಪಕ್ಷ ಸಂಘಟಿಸಿ

Maski Bjp N
ಮಸ್ಕಿಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾಗಿ ಆಯ್ಕೆಯಾದ ಶರಣಬಸವ ಸೊಪ್ಪಿಮಠ ಅವರಿಗೆ ಜಿಲ್ಲಾ ಅಧ್ಯಕ್ಷ ವೀರನಗೌಡ ಲೆಕ್ಕಿಹಾಳ ಅವರು ಪಕ್ಷದ ಧ್ವಜ ನೀಡಿದರು. ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್, ಶಾಸಕ ಮನಪ್ಪ ವಜ್ಜಲ್, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಪ್ರಮುಖರಾದ ಡಾ.ಬಸವರಾಜ ಕ್ಯಾವಟರ್, ಕೆ.ಕರಿಯಪ್ಪ, ಬಸವಂತರಾಯ ಕುರಿ, ಡಾ.ಬಿ.ಎಚ್.ದಿವಟರ್ ಇದ್ದರು.
Published on

ಮಸ್ಕಿ: ಪ್ರತಿ ಗ್ರಾಮದಲ್ಲಿ ತಳಮಟ್ಟದಿಂದ ಪಕ್ಷವನ್ನು ಸಂಘಟಿಸಿ ಬಲಪಡಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ವೀರನಗೌಡ ಲೆಕ್ಕಿಹಾಳ ಹೇಳಿದರು.

ಪಟ್ಟಣದ ಶ್ರೀ ಭ್ರಮರಾಂಬ ದೇವಸ್ಥಾನದಲ್ಲಿ ಗುರುವಾರ ಮಸ್ಕಿ ಮಂಡಲದ ಅಧ್ಯಕ್ಷರಾಗಿ ಆಯ್ಕೆಯಾದ ಶರಣಬಸವ ಸೊಪ್ಪಿಮಠ ಅವರಿಗೆ ಪಕ್ಷದ ಧ್ವಜ ನೀಡಿ ಅಧಿಕಾರ ವಹಿಸಿ ನಂತರ ಮಾತನಾಡಿದರು.

ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಮಾತನಾಡಿ, ಮುಂಬರುವ ದಿನಗಳಲ್ಲಿ ತಾಪಂ ಮತ್ತು ಜಿಪಂ ಚುನಾವಣೆ ಬರಲಿವೆ. ಪಕ್ಷ ಗೆಲುವು ಸಾಧಿಸಲು ಕಾರ್ಯಕರ್ತರು ಈಗಿಂದಲೇ ಕಾರ್ಯಪ್ರವೃತ್ತರಾಗಬೇಕು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದ ಯೋಜನೆಗಳ ಕುರಿತು ಜನರಿಗೆ ಮನವರಿಕೆ ಮಾಡಬೇಕು ಎಂದು ತಿಳಿಸಿದರು.

ಲಿಂಗಸುಗೂರು ಶಾಸಕ ಮನಪ್ಪ ವಜ್ಜಲ್, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಬಿ.ವಿ.ನಾಯಕ, ಮಾಜಿ ಶಾಸಕ ಬಸನಗೌಡ ಬ್ಯಾಗವಾಟ್, ಕೊಪ್ಪಳದ ಡಾ.ಬಸವರಾಜ ಕ್ಯಾವಟರ್, ಪ್ರಮುಖರಾದ ಕೆ.ಕರಿಯಪ್ಪ, ಬಸವಂತರಾಯ ಕುರಿ, ಸಿದ್ದಣ್ಣ ಹೂವಿನಬಾವಿ, ಸಂತೋಷ ರಾಜಗುರು, ಡಾ.ಬಿ.ಎಚ್.ದಿವಟರ್, ಮಲ್ಲಪ್ಪ ಅಂಕುಶದೊಡ್ಡಿ, ಶರಣಬಸವ ವಕೀಲರು, ಶಿವಪುತ್ರಪ್ಪ ಅರಳಹಳ್ಳಿ, ಶಿವಶಂಕ್ರಪ್ಪ ಹಳ್ಳಿ, ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ, ಉಪಾಧ್ಯಕ್ಷೆ ಗೀತಾ ಶಿವರಾಜ ಬಿ. ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net