ಕಾಂಗ್ರೆಸ್ ಸರ್ಕಾರದಿಂದ ರಾಜ್ಯ ಅಧಃಪತನದತ್ತ

pratibhatane
ರಾಜ್ಯ ಸರ್ಕಾರದ ವಕ್ಫ್ ನಿರ್ಣಯ ಖಂಡಿಸಿ ಕಾರ್ಕಳದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಯಿತು.
Published on

ವಿಜಯವಾಣಿ ಸುದ್ದಿಜಾಲ ಕಾರ್ಕಳ

ವಿಧಾನಸೌಧವೇ ವಕ್ಫ್ ಆಸ್ತಿ ಎಂದು ಕಾಂಗ್ರೆಸ್ ಹೇಳುತ್ತಿದೆ. ಸಾವಿರಾರು ವರ್ಷಗಳ ಇತಿಹಾಸವುಳ್ಳ ಮಠ ಮಂದಿರಗಳನ್ನು ಕಾಂಗ್ರೆಸ್ ಸರ್ಕಾರ ವಕ್ಫ್ ಆಸ್ತಿ ಎಂದು ಘೋಷಿಸುತ್ತಿರುವುದು ಅಪಾಯಕಾರಿ ಬೆಳವಣಿಗೆ. ಸಿದ್ದರಾಮಯ್ಯ ಸರ್ಕಾರ ರಾಜ್ಯವನ್ನು ಅಧಃಪತನಕ್ಕೆ ತಳ್ಳುತ್ತಿದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕಿದಿಯೂರು ಉದಯ್‌ಕುಮಾರ್ ಶೆಟ್ಟಿ ಆರೋಪಿಸಿದರು.

ಕಾರ್ಕಳದ ಬಂಡಿಮಠ ಬಸ್ ನಿಲ್ದಾಣದಲ್ಲಿ ಕಾರ್ಕಳ ಬಿಜೆಪಿ ಮಂಡಲ ವತಿಯಿಂದ ರಾಜ್ಯ ಸರ್ಕಾರ ವಿರುದ್ಧ ಆಯೋಜಿಸಿದ ಪ್ರತಿಭಟನೆಯಲ್ಲಿ ಮಾತನಾಡಿದರು.

ಕಾರ್ಕಳ ಬಿಜೆಪಿ ಮಂಡಲ ಅಧ್ಯಕ್ಷ ನವೀನ್ ನಾಯಕ್ ಮಾತನಾಡಿ, ರಾಜ್ಯದಲ್ಲಿ ಲ್ಯಾಂಡ್ ಜಿಹಾದ್‌ಗೆ ಕಾಂಗ್ರೆಸ್ ಪ್ರೇರಣೆ ನೀಡುತ್ತಿದೆ. ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸುವ ಮೂಲಕ ಅಲ್ಪಸಂಖ್ಯಾತರನ್ನು ಓಲೈಸುತ್ತಿದೆ. ಸಚಿವ ಜಮೀರ್ ಅಹಮದ್ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ಕೆಳಗಿಳಿಸಿ, ಸಿದ್ದರಾಮಯ್ಯ ಜನರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ಹಿಂದು ಮುಖಂಡ ಸುನೀಲ್ ಕೆ.ಆರ್., ಬಿಜೆಪಿ ಹಿರಿಯ ಮುಖಂಡ ಮಣಿರಾಜ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ರೇಶ್ಮಾ ಉದಯ್ ಶೆಟ್ಟಿ ಮೊದಲಾದವರು ಮಾತನಾಡಿದರು. ಬಿಜೆಪಿ ಜಿಲ್ಲಾ ಉಪಾದ್ಯಕ್ಷ ಮಹಾವೀರ ಹೆಗ್ಡೆ ಸಹಿತ ಪಕ್ಷದ ಮುಖಂಡರು ಉಪಸ್ಥಿತರಿದ್ದರು. ಬಳಿಕ ಬಂಡಿಮಠ ಬಸ್ ನಿಲ್ದಾಣದಿಂದ ತಾಲೂಕು ಕಚೇರಿ ತನಕ ಮೆರವಣಿಗೆ ಸಾಗಿ, ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net