ಬೂತ್‌ಮಟ್ಟದಿಂದ ಬಿಜೆಪಿ ಸಂಘಟಿಸಲಿ

2
ರಾಯಬಾಗ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ರಾಯಬಾಗ ಮಂಡಲದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸತೀಶ ಅಪ್ಪಾಜಿಗೋಳ ಮಾತನಾಡಿದರು. ಬಸವರಾಜ ಯಕ್ಕಂಚಿ ಇತರರಿದ್ದರು.
Published on

ರಾಯಬಾಗ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ ಎಂದರು.

ಪಟ್ಟಣದ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ರಾಯಬಾಗ ಮಂಡಲದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಬೂತ್‌ಮಟ್ಟದಿಂದ ಪಕ್ಷವನ್ನು ಸಂಘಟಿಸಬೇಕು ಎಂದರು.

ವಿಭಾಗ ಸಹ ಸಂಘಟಕ ಬಸವರಾಜ ಯಕ್ಕಂಚಿ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಯೋಜನೆ ಮಾಹಿತಿ ನೀಡಬೇಕು ಎಂದರು.

ಚಿಕ್ಕೋಡಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಹಳಿಂಗಳಿ, ಶಿವಾನಂದ ನವಿನಾಳ, ಅಮೃತ ಕುಲಕರ್ಣಿ, ರಾಯಬಾಗ ಮಂಡಲ ಅಧ್ಯಕ್ಷ ಬಸವರಾಜ ಡೊಣವಾಡೆ, ವಿ.ಎಸ್.ಪೂಜೇರಿ, ವಿಜಯ ಕೋಟಿವಾಲೆ, ರಾಜಶೇಖರ ಖನದಾಳೆ, ಮಹಾದೇವ ಬೋರಗಾಂವೆ, ಪೃಥ್ವಿರಾಜ ಜಾಧವ, ಮಹೇಶ ಕರಮಡಿ, ಬಸವರಾಜ ಯಲಶೆಟ್ಟಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net