

ರಾಮದುರ್ಗ: ಚಾರ್ಟರ್ಡ್ ಅಕೌಂಟಂಟ್ ವೃತ್ತಿ ಪ್ರಾರಂಭಿಸುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಪಟ್ಟಣದ ತುರನೂರ ಶ್ರೀ ಎಸ್.ಎಸ್. ಪತ್ತೇಪೂರ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಜು. 20, 21ರಂದು ಸಂಸ್ಥಾಪನಾ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಡಾ.ರಾಜೇಶ ಗುಂಡಾ ಹೇಳಿದರು.
ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಣಿಜ್ಯ ಕ್ಷೇತ್ರದಲ್ಲಿ ಉನ್ನತ ಹುದ್ದೆ ಹೊಂದಬಯಸುವ ತಾಲೂಕಿನ ವಿದ್ಯಾರ್ಥಿಗಳಿಗೆ ಸೌಲಭ್ಯ ಒದಗಿಸುವ ಉದ್ದೇಶದಿಂದ ಸಿಎ ಕೋರ್ಸ್ ಪ್ರಾರಂಭಿಸುವ ಉದ್ದೇಶದಿಂದ ಕಾರ್ಯಾಗಾರ ನಡೆಸಲಾಗುತ್ತಿದೆ.
ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ವಿದ್ಯಾರ್ಥಿಗಳು ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ವಿಜಯಪುರ ನಗರಗಳಲ್ಲಿ ಓದಿ ಅಧಿಕ ವೆಚ್ಚದೊಂದಿಗೆ ವ್ಯಾಸಂಗ ಮಾಡುವ ಬಡವರಿಗೆ ನೆರವಾಗುವ ನಿಟ್ಟಿನಲ್ಲಿ ಕೋರ್ಸ್ ಪ್ರಾರಂಭಕ್ಕೆ ಯೋಜನೆ ಹಾಕಿಕೊಂಡಿದ್ದು, ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಪ್ರೊ.ಆರ್.ಎಸ್. ಜಿರಂಕಳಿ-9448164598, ಎಂ.ವಿ. ಬಿಳಿಗಿರಿ-99866325918, ಎಂ.ಆರ್. ಕುಂಬಾರ-9916391505 ಸಂಪರ್ಕಿಸಬೇಕೆಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಪವನ ಪತ್ತೇಪುರ, ಸಂಸ್ಥೆಯ ಆಡಳಿತಾಧಿಕಾರಿ ಪ್ರೊ. ಜಿ.ಬಿ. ವಡವಡಗಿ ಇತರರಿದ್ದರು.