ಇಂದಿನಿಂದ ಸಿಎಂ ಸಿದ್ದರಾಮಯ್ಯ ಪ್ರಚಾರ

Published on

ಸಂಡೂರು: ಉಪಚುನಾವಣೆ ಹಿನ್ನೆಲೆಯಲ್ಲಿ ಸಿ.ಎಂ.ಸಿದ್ದರಾಮಯ್ಯ ನ.7ರಿಂದ ಮೂರು ದಿನ ಕ್ಷೇತ್ರದಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದರು.

ಕ್ಷೇತ್ರದ 18 ಕಡೆ ಮುಖ್ಯಮಂತ್ರಿ ಕಾರ್ಯಕ್ರಮ ಆಯೋಜಿಸಲಾಗಿದೆ. 33ಸಚಿವರು ಹಾಗೂ ಶಾಸಕರು ಬರಲಿದ್ದಾರೆ ಎಂದರು.

ಜನಾರ್ದನ ರೆಡ್ಡಿ ಆಪರೇಷನ್ ಕಮಲ ಮಾಡುತ್ತಿದ್ದು ಮಾಡಲಿ. ಸಂಡೂರು ಜನರಿಗೆ ಜನಾರ್ದನರೆಡ್ಡಿ ಬಗ್ಗೆ ಗೊತ್ತು. ವಿವಾದಗಳನ್ನು ಸೃಷ್ಟಿಸುವುದು ಬಿಜೆಪಿ ನಾಯಕರ ಕೆಲಸವಾಗಿದೆ. ಮಾಜಿ ಸಚಿವ ಎಂ.ವೈ.ಘೋರ್ಪಡೆ ಸಂಡೂರು ತಾಲೂಕಿನಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಲ್ಲಿ ಘೋರ್ಪಡೆ ತಂದ ಮೀಸಲಾತಿಯಿಂದ ಅನೇಕರು ವಿವಿಧ ಚುನಾವಣೆಗಳಲ್ಲಿ ಪ್ರಯೋಜನ ಪಡೆದಿದ್ದಾರೆ. ಈ ಬಗ್ಗೆ ಯಾರೂ ಮಾತಾಡುತ್ತಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net