

ಗೋಕಾಕ: ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ನಿರ್ಮಿಸಿರುವ ಭವ್ಯ ವೇದಿಕೆಯಲ್ಲಿ ಜ.17, 18 ಹಾಗೂ 19ರಂದು 21ನೇ ಸತೀಶ ಶುಗರ್ಸ್ ಅವಾರ್ಡ್ಸ್ ಸಾಂಸತಿಕ ಕಾರ್ಯಕ್ರಮ ಪ್ರತಿದಿನ ಸಂಜೆ 5ರಿಂದ 10 ಗಂಟೆ ವರೆಗೆ ಜರುಗಲಿದೆ ಎಂದು ಸತೀಶ್ ಶುಗರ್ಸ್ ಆವಾರ್ಡ್ಸ್ ಸಂಟಕ ರಿಯಾಜ್ ಚೌಗಲಾ ಹೇಳಿದರು.
ನಗರದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. 20ನೇ ಸತೀಶ ಶುಗರ್ಸ್ ಅವಾರ್ಡ್ಸ್ ಭಾಷಣ ಸ್ಪರ್ಧೆ ವಿಜೇತ ವಿದ್ಯಾರ್ಥಿಗಳು ಕಾರ್ಯಕ್ರಮ ಉದ್ಘಾಟಿಸುವರು. ಅಂತಿಮ ಭಾಷಣ ಸ್ಪರ್ಧೆಗೆ ಹಂತಕ್ಕೆ ಒಟ್ಟು 700 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ. 17, 18 ಹಾಗೂ 19ರಂದು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧೆ, ಜಾನಪದ ನತ್ಯ ಸ್ಪರ್ಧೆ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಾನಪದ ಗಾಯನ ಸ್ಪರ್ಧೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ಸಮೂಹ ನತ್ಯ ಸ್ಪರ್ಧೆ ಜರುಗಲಿದೆ. ಎಲ್ಲ ವಿಭಾಗದ ಭಾಷಣ ಸ್ಪರ್ಧೆ ಹಾಗೂ ಸಾಂಸತಿಕ ಸ್ಪರ್ಧೆ ವಿಜೇತ ವಿದ್ಯಾರ್ಥಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಗಣ್ಯರಿಂದ ಬಹುಮಾನ ವಿತರಣೆ ನಡೆಯಲಿದೆ ಎಂದರು.
ಈ ಬಾರಿ ಮುಕ್ತ ವಿಭಾಗದ ಸ್ಪರ್ಧೆಗಳನ್ನು ರಾಜ್ಯಮಟ್ಟಕ್ಕೆ ವಿಸ್ತರಿಸಲಾಗಿದೆ. ಪ್ರತಿಭಾವಂತ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ತಲಾ 15ಸಾವಿರ ರೂ. ಬಹುಮಾನ ನೀಡಿ ಗೌರವಿಸಲಾಗುವುದು. ವಿವಿಧ ಸ್ಫರ್ಧೆಗಳ ವಿಜೇತರಿಗೆ 50 ಸಾವಿರ ರೂ.ದಿಂದ 7 ಸಾವಿರ ರೂ. ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ಹಾಗೂ ಟ್ರೋಫಿ ನೀಡಿ ಗೌರವಿಸಲಾಗುವುದು. ಸಾರ್ವಜನಿಕರಿಗೆ 12ಸಾವಿರ ಆಸನ ವ್ಯವಸ್ಥೆ ಮಾಡಲಾಗಿದ್ದು, ಕಾರ್ಯಕ್ರಮ ಯಶಸ್ಸಿಗೆ ಸಹಕರಿಸಬೇಕು ಎಂದು ವಿನಂತಿಸಿದರು.
ಸತೀಶ ಶುಗರ್ಸ್ ಆವಾರ್ಡ್ಸ ಸಂಟಕ ಪ್ರಕಾಶ ಲಟ್ಟಿ, ೌಂಡೇಷನ್ ಸದಸ್ಯ ಸುರೇಶ ಜೋರಾಪುರ, ಜುಬೇರ್ ಮಿರ್ಜಾಬಾಯಿ, ಐ.ಎಸ್. ನಗಾರಿ ಉಪಸ್ಥಿತರಿದ್ದರು.