

ಮಾನ್ವಿ: ತಾಲೂಕಿನ ಗೋರಕಲ್ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಪ್ರೌಢಶಾಲೆಯ ಅವರಣದಲ್ಲಿ ಶನಿವಾರ ಅಂತಾರಾಷ್ಟ್ರೀಯ ಯೋಗ ದಿನ ಮತ್ತು ದಶಮಾನೋತ್ಸವ ಸಂಭ್ರಮ ಅಂಗವಾಗಿ ಶಿಕ್ಷಣ ಇಲಾಖೆ ಹಾಗೂ ಯೋಗ ಸನ್ನಿಧಿ ಜ್ಞಾನ ವಿದ್ಯಾಪೀಠ ಟ್ರಸ್ಟ್‌ವತಿಯಿಂದ ಉಚಿತ ಯೋಗ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಇದನ್ನು ಓದಿ: ಉಚಿತ ಆರೋಗ್ಯ ಶಿಬಿರಗಳ ಸದುಪಯೋಗವಾಗಲಿ; ಡಾ. ಆನಂದ
ಯೋಗ ಗುರು ಅನ್ನದಾನಯ್ಯಸ್ವಾಮಿ ಮಾತನಾಡಿ, ಪ್ರತಿನಿತ್ಯ ವಿದ್ಯಾರ್ಥಿಗಳು ಯೋಗಾಭ್ಯಾಸ ಮಾಡುವುದರಿಂದ ಬೌದ್ಧಿಕ ಮಟ್ಟ ಹಾಗೂ ಏಕಾಗ್ರತೆ ಹೆಚ್ಚುತ್ತದೆ, ನೆನಪಿನ ಶಕ್ತಿ ಬೆಳೆಯುತ್ತದೆ ಎಂದರು.
ವಿದ್ಯಾರ್ಥಿಗಳಿಗೆ ಸೂರ್ಯ ನಮಸ್ಕಾರ, ಪ್ರಾಣಾಯಾಮ, ವೃಕ್ಷಾಸನ, ಪಾದಹಸ್ತಾಸನ, ಚಕ್ರಾಸನ, ಶಶಾಂಕಸನ, ಮುದ್ರೆಗಳನ್ನು ಅಭ್ಯಾಸ ಮಾಡಿಸಲಾಯಿತು.