ರೆಡ್‌ಕ್ರಾಸ್‌ನಿಂದ ಹಣ್ಣು ವಿತರಣೆ

hannu
Published on

ಬೆಳ್ತಂಗಡಿ: ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಬೆಳ್ತಂಗಡಿ, ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಬಂಟ್ವಾಳ ಬ್ರಾಂಚ್ ಮತ್ತು ಜೆಸಿಐ ಸೀನಿಯರ್ ಛೇಂಬರ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಆಚರಿಸಲಾಯಿತು.

ಬೆಳ್ತಂಗಡಿ ತಾಲೂಕು ಸಮುದಾಯ ಆರೋಗ್ಯ ಕೇಂದ್ರದ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ಆಸ್ಪತ್ರೆಯ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.

ಆಸ್ಪತ್ರೆಯ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.
ಆಸ್ಪತ್ರೆಯ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಮ್, ನ್ಯಾಷನಲ್ ಇನ್ಶೂರೆನ್ಸ್ ಹಿರಿಯ ಅಭಿವೃದ್ಧಿ ಅಧಿಕಾರಿ ಜಾನ್ ಅರ್ವಿನ್ ಡಿಸೋಜ, ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಹರಿದಾಸ್ ಎಸ್.ಎಂ, ಸುಳ್ಯ ಶಾಖೆಯ ನಿವೃತ್ತ ಮ್ಯಾನೇಜರ್ ಪ್ರಮೋದ್ ಆರ್. ನಾಯಕ್, ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಪ್ರಧಾನ ಕಾರ್ಯದರ್ಶಿ ಯಶವಂತ ಪಟವರ್ಧನ್, ನಿರ್ದೇಶಕ ಶಿವಕುಮಾರ್ ಎಸ್, ನಿರ್ದೇಶಕಿ ಸುಕನ್ಯಾ ಎಚ್, ಉಪನ್ಯಾಸಕ ಸುಜೀತ್ ಉಜಿರೆ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net