ಫ್ರೂಟ್ಸ್: ಕಡಿಮೆ ಪ್ರಗತಿ ಸಾಧಿಸಿರುವ ಅಧಿಕಾರಿ, ಸಿಬ್ಬಂದಿಗೆ ನೋಟಿಸ್

mysore
Published on

ಮೈಸೂರು; ಫ್ರೂಟ್ಸ್ (ರೈತರ ನೋಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ) ತಂತ್ರಾಂಶದಲ್ಲಿ ರೈತರ ಪಹಣಿಯನ್ನು ಸೇರಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಇದರಲ್ಲಿ ಕಡಿಮೆ ಪ್ರಗತಿ ಸಾಧಿಸಿರುವ ಅಧಿಕಾರಿ, ಸಿಬ್ಬಂದಿಗೆ ನೋಟಿಸ್ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಎಚ್ಚರಿಸಿದರು.


ಮೈಸೂರು ಮತ್ತು ಹುಣಸೂರು, ಉಪವಿಭಾಗದ ಉಪವಿಭಾಗಾಧಿಕಾರಿಗಳು, ಉಪ ಕೃಷಿ ನಿರ್ದೇಶಕರು, ಎಲ್ಲ ತಾಲೂಕಿನ ತಹಸೀಲ್ದಾರ್, ಸಹಾಯಕ ಕೃಷಿ ನಿರ್ದೇಶಕರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು, ಕೃಷಿ ಅಧಿಕಾರಿಗಳು ಮತ್ತು ಸಹಾಯಕ ತೋಟಗಾರಿಕೆ ಅಧಿಕಾರಿಯೊಂದಿಗೆ ನಗರದಲ್ಲಿ ಸಭೆ ನಡೆಸಿದರು.


ಈ ವಿಷಯದಲ್ಲಿ ಕಡಿಮೆ ಪ್ರಗತಿ ಸಾಧಿಸಿರುವ ಅಧಿಕಾರಿ, ಸಿಬ್ಬಂದಿಗೆ ಕಾರಣ ಕೇಳುವ ನೋಟಿಸ್ ಅನ್ನು ಜಾರಿ ಮಾಡಲು ಸೂಚಿಸಿದರು. ಈ ಕೂಡಲೇ ಎಲ್ಲ ಅಧಿಕಾರಿಗಳು ಕಾರ್ಯನ್ಮುಖರಾಗಿ ಜಿಲ್ಲೆಗೆ ನಿಗಡಿಪಡಿಸಿರುವ ಗುರಿಯನ್ನು ಮುಂದಿನ 7 ದಿನದೊಳಗೆ ಪ್ರಗತಿ ಸಾಧಿಸಬೇಕು ಎಂದು ಗಡುವು ನೀಡಿದರು.


ಮೈಸೂರಿನ ಎಲ್ಲ ರೈತರು ನಿಮ್ಮ ಎಲ್ಲ ಪಹಣಿ, ಸರ್ವೇ ನಂಬರ್‌ಗಳನ್ನು ಎಫ್‌ಐಡಿಯಲ್ಲಿ ಸೇರಿಸಬೇಕು. ಪ್ರಸ್ತುತ ಕಂದಾಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆಯಲ್ಲಿಎಐಡಿಯನ್ನು ಮಾಡಿಸಬಹುದಾಗಿರುತ್ತದೆ. ಆದ್ದರಿಂದ ರೈತರು ತಮ್ಮ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಹಾಗೂ ಫೋನ್ ನಂಬರ್ ಅನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಅಧಿಕಾರಿಗಳು ಅಥವಾ ತೋಟಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ನೀಡಬೇಕು.

ಆ ಮಾಹಿತಿಯನ್ನು ಎಫ್‌ಐಡಿಯಲ್ಲಿ ನೋಂದಣಿ ಮಾಡಿಕೊಡಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net