ರೈತರು 30ರ ಒಳಗೆ ಎಫ್‌ಐಡಿ ಮಾಡಿಸಿಕೊಳ್ಳಲಿ

Untitled design (17)
ಹಿರೇಕೋಟ್ನೆಕಲ್‌ನಲ್ಲಿ ರೈತ ಸಂಪರ್ಕ ಕೇಂದ್ರದಲ್ಲಿ ಏರ್ಪಡಿಸಿದ್ದ ರೈತರ ಜಾಗೃತಿ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ರಾಜು ಪಿರಂಗಿ ಮಾತನಾಡಿದರು. ಸಹಾಯಕ ಕೃಷಿ ನಿರ್ದೇಶಕ ಹುಸೇನ್ ಸಾಹೇಬ್ ಹಾಗೂ ರೈತರು ಇದ್ದರು.
Published on

ಮಾನ್ವಿ: ತಾಲೂಕಿನ ರೈತರು ಕಡ್ಡಾಯವಾಗಿ ಫ್ರೂಟ್ಸ್ ತಂತ್ರಾಂಶದಲ್ಲಿ ಜಮೀನುಗಳ ಸರ್ವೇ ನಂ. ಜೋಡಣೆ ಮಾಡಿಕೊಳ್ಳುವ ಮೂಲಕ ಗುರುತಿನ ಚೀಟಿ ಪಡೆದುಕೊಳ್ಳಬೇಕು ಎಂದು ತಹಸೀಲ್ದಾರ್ ರಾಜು ಪಿರಂಗಿ ಹೇಳೀದರು.

ಫ್ರೂಟ್ಸ್ ತಂತ್ರಾಂಶದಲ್ಲಿ ಜಮೀನುಗಳ ಸರ್ವೇ ನಂ. ಜೋಡಣೆ ಮಾಡಿ

ತಾಲೂಕಿನ ಹಿರೇಕೋಟ್ನೆಕಲ್ ಗ್ರಾಮದಲ್ಲಿ ರೈತ ಸಂಪರ್ಕ ಕೇಂದ್ರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರೈತರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಒಂದು ವೇಳೆ ಜಂಟಿ ಖಾತೆದಾರರು ಇದ್ದಲ್ಲಿ ಪ್ರತ್ಯೇಕವಾಗಿ ಎಫ್‌ಐಡಿ ಮಾಡಿಸಿಕೊಂಡಾಗ ಪರಿಹಾರದ ಹಣ ಖಾತೆಗೆ ಜಮೆ ಮಾಡಲು ಸಾಧ್ಯವಾಗುತ್ತದೆ. ನ.30 ರವರೆಗೆ ಎಫ್‌ಐಡಿ ಮಾಡಿಸಿಕೊಳ್ಳಲು ಅವಕಾಶವಿದ್ದು, ರೈತರು ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬೇಕು ಎಂದು ತಿಳಿಸಿದರು.

ಸಹಾಯಕ ಕೃಷಿ ನಿರ್ದೇಶಕ ಹುಸೇನ್ ಸಾಹೇಬ್ ಮಾತನಾಡಿ, ತಾಲೂಕಿನಲ್ಲಿ ಒಟ್ಟು 66,269 ಕೃಷಿ ಪ್ಲಾಟ್‌ಗಳಿವೆ. ಇದುವರೆಗೂ ಕೇವಲ 42,636 ಪ್ಲಾಟ್‌ಗಳನ್ನು ಮಾತ್ರ ರೈತರು ಎಫ್‌ಐಡಿ ಮಾಡಿಸಿಕೊಂಡಿದ್ದಾರೆ. ಇನ್ನು 23,636 ಪ್ಲಾಟ್‌ಗಳು ಬಾಕಿ ಇವೆ ಎಂದರು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net