ಕಾರ್ಮಿಕರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಿ

07-10-Shiva-4
ಚುನಾವಣೆ ಪೂರ್ವದಲ್ಲಿ ಕಾರ್ಮಿಕರಿಗೆ ನೀಡಿದ ಭರವಸೆ ಈಡೇರಿಸುವಂತೆ ಒತ್ತಾಯಿಸಿ ರಾಯಚೂರಿನ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಸಿಪಿಐನಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು. ಪಕ್ಷದ ಕಾರ್ಯದರ್ಶಿ ಮಂಡಳಿ ಸದಸ್ಯ ಬಾಷುಮಿಯಾ, ಪದಾಕಾರಿಗಳಾದ ಶ್ರೀಶೈಲರೆಡ್ಡಿ, ಎಸ್.ಎಂ.ಪೀರಸಾಬ್, ಆನಂದಪ್ಪ, ಆಂಜನೇಯ, ಮಾರೆಪ್ಪ, ನರಸಿಂಹಲು, ಹನುಮಂತು, ತಿಮ್ಮಪ್ಪ, ಪ್ರಕಾಶ, ಹಂಪಣ್ಣ, ನರಸಪ್ಪ ಇದ್ದರು.
Published on

ರಾಯಚೂರು: ಅಸಂಘಟಿತ ಕಾರ್ಮಿಕರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರಿಗೆ ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸ್ಥಳೀಯ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಸಿಪಿಐನಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಸೂಕ್ತ ಕ್ರಮಕ್ಕೆ ಮುಂದಾಗಬೇಕು. ತುಂಗಭದ್ರಾ ಎಡದಂಡೆ ಕಾಲುವೆ ಕೊನೆ ಭಾಗಕ್ಕೆ ನೀರು ಹರಿಸಬೇಕು ಎಂದು ಆಗ್ರಹಿಸಿದರು.
ಅಸಂಘಟಿತ ಕಾರ್ಮಿಕರಾಗಿ 6ನೇ ಗ್ಯಾರಂಟಿಯಲ್ಲಿ ಘೋಷಿಸಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ., ಸಹಾಯಕರಿಗೆ 10 ಸಾವಿರ ರೂ. ಮತ್ತು ಆಶಾ ಕಾರ್ಯಕರ್ತೆಯರಿಗೆ 8 ಸಾವಿರ ರೂ., ಬಿಸಿಯೂಟ ಅಡುಗೆವರಿಗೆ 6 ಸಾವಿರ ರೂ. ಗೌರವಧನ ಹೆಚ್ಚಿಸಬೇಕು.
ಕೃಷಿ ಮತ್ತು ಎಪಿಎಂಸಿ ಕಾಯ್ದೆಗಳನ್ನು ರದ್ದುಗೊಳಿಸಬೇಕು. ಕೆಲಸದ ಅವಯನ್ನು 12 ಗಂಟೆಗೆ ವಿಸ್ತರಿಸುವ ನಿರ್ಧಾರವನ್ನು ಹಿಂಪಡೆಯಬೇಕು. ರಾತ್ರಿ ಪಾಳೆಯಲ್ಲಿ ಮಹಿಳೆಯರನ್ನು ದುಡಿಸಿಕೊಳ್ಳುವುದನ್ನು ನಿಲ್ಲಿಸಬೇಕು. ಪೌರ ಕಾರ್ಮಿಕರನ್ನು ಕಾಯಂಗೊಳಿಸಬೇಕು.
ಅತಿಥಿ ಶಿಕ್ಷಕರ, ಉಪನ್ಯಾಸಕರನ್ನು ಕಾಯಂಗೊಳಿಸಲು ಸೂಕ್ತ ಯೋಜನೆ ರೂಪಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಬೇಕು. ವಸತಿ ಸಮಸ್ಯೆಗೆ ತೊಡಕಾಗಿರುವ ಅರಣ್ಯ ಕಾಯ್ದೆಯನ್ನು ತಿದ್ದುಪಡಿಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಪಕ್ಷದ ಕಾರ್ಯದರ್ಶಿ ಮಂಡಳಿ ಸದಸ್ಯ ಬಾಷುಮಿಯಾ, ಪದಾಕಾರಿಗಳಾದ ಶ್ರೀಶೈಲರೆಡ್ಡಿ, ಎಸ್.ಎಂ.ಪೀರಸಾಬ್, ಆನಂದಪ್ಪ, ಆಂಜನೇಯ, ಮಾರೆಪ್ಪ, ನರಸಿಂಹಲು, ಹನುಮಂತು, ತಿಮ್ಮಪ್ಪ, ಪ್ರಕಾಶ, ಹಂಪಣ್ಣ, ನರಸಪ್ಪ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net