

ಆನೇಕಲ್: ತಾಲೂಕು ಕಚೇರಿ ಆವರಣದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ನಿರ್ದಿಷ್ಟವಾದಿ ಪ್ರತಿಭಟನೆ ಗುರುವಾರ ನಾಲ್ಕನೇ ದಿನ ಪೂರೈಸಿದ್ದು, ವಿಧಾನ ಪರಿಷತ್ ಸದಸ್ಯ ಗೋಪಿನಾಥ್ ರೆಡ್ಡಿ ಭೇಟಿ ನೀಡಿ ಮಾತುಕತೆ ನಡೆಸಿದರು.
ಗ್ರಾಮ ಆಡಳಿತ ಅಧಿಕಾರಿಗಳು ಹಲವು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ, ಕೂಡಲೇ ಸಚಿವರು ಸ್ಪಂದಿಸಿ ಅವರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಗೋಪಿನಾಥ್ ರೆಡ್ಡಿ ಒತ್ತಾಯಿಸಿದರು.
ಸರ್ಕಾರಿ ಅಧಿಕಾರಿಗಳಿಗೂ ಮೂಲ ಸೌಕರ್ಯ ಕಲ್ಪಿಸುವುದು ಸರ್ಕಾರದ ಜವಾಬ್ದಾರಿ ಎದರು. ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ, ನಾವು ಬೇಡಿಕೆಗಳನ್ನು ಇಟ್ಟಿರುವುದು ನಮ್ಮ ಸ್ವಂತ ಮನೆಯವರಿಗಲ್ಲ, ನಾವು ಕೇಳುತ್ತಿರುವುದು ಮೂಲ ಸೌಕರ್ಯಗಳಾದ ಸ್ವಂತ ಕಟ್ಟಡ, ಲ್ಯಾಪ್‌ಟಾಪ್, ಟಿಎ ಇವೆಲ್ಲವೂ ನಾವು ನಮ್ಮ ಸ್ವಂತ ಹಣದಲ್ಲಿ ವ್ಯಯಿಸುತಿದ್ದೇವೆ. ಅಂತರ್ ಜಿಲ್ಲಾ ವರ್ಗಾವಣೆಯನ್ನು ನಿಲ್ಲಿಸಿರುವುದನ್ನು ಪಡೆಯಬೇಕು. ಮುಂಬಡ್ತಿಗಳನ್ನು ನೀಡಬೇಕು, ಹೋರಾಟ ಶುರುವಾಗಿ ನಾಲ್ಕು ದಿನಗಳು ಕಳೆದರೂ ಸರ್ಕಾರ ಸ್ಪಂದಿಸುತ್ತಿಲ್ಲ, ಸರ್ಕಾರ ಸ್ಪಂದಿಸುವವರೆಗೂ ನಮ್ಮ ನಿರ್ದಿಷ್ಟ ಅವಧಿ ಮುಷ್ಕರ ಮುಂದುವರಿಯಲಿದೆ ಎಂದರು.
ಸರ್ಕಾರಿ ನೌಕರರ ಸಂಘದ ನಿರ್ದೇಶಕ ನಾಗರಾಜ್ ಕೆ, ಗುರುರಾಜ್, ಪಲ್ಲವಿ, ಗಾಯತ್ರಿ, ಪ್ರದೀಪ್ ಸೇರಿದಂತೆ ಇನ್ನಿತರರು ಇದ್ದರು.
ಆನೇಕಲ್ ತಾಲೂಕು ಕಚೇರಿ ಆವರಣದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಪ್ರತಿಭಟನೆ ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯ ಗೋಪಿನಾಥ ರೆಡ್ಡಿ ಭೇಟಿ ನೀಡಿ ಮಾಹಿತಿ ಪಡೆದರು. ಆನೇಕಲ್ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಉಪಾಧ್ಯಕ್ಷ ಮಹಾಂತೇಶ್ ಕೊಳ್ಳಾಳ್, ಪ್ರಧಾನ ಕಾರ್ಯದರ್ಶಿ ಚಂದ್ರು ಮೈದೂರ್, ಜಿಲ್ಲಾ ಸಂಘಟನ ಕಾರ್ಯದರ್ಶಿ ಚಂದ್ರಶೇಖರ್, ಮೂರ್ತಿ, ಸಂತೋಷ್ ಇದ್ದರು.