ನೌಕರರ ಬೇಡಿಕೆ ತ್ವರಿತವಾಗಿ ಈಡೇರಿಸಿ

Fulfill the demands of employees quickly
ವಿಜಯಪುರ ಜಿಲ್ಲಾಡಳಿತ ಕಚೇರಿ ಎದುರು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ, ವಿವಿಧ ಇಲಾಖೆಗಳ ನೌಕರರ ಸಂ ಹಾಗೂ ಹೊರಗುತ್ತಿಗೆ ನೌಕರರ ಸಂದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಸುರೇಶ ಜೀಬಿ, ಅಶೋಕ ಇಲಕಲ್​, ಬಿ.ಎಚ್​. ನಾಡಗಿರಿ ಮತ್ತಿತರರಿದ್ದಾರೆ.
Published on

ವಿಜಯಪುರ: ಹಳೆಯ ನಿಶ್ಚಿತ ಪಿಂಚಣಿ ಮರುಸ್ಥಾಪನೆ, ಏಳನೇ ವೇತನ ಆಯೋಗ ಜಾರಿ ಸೇರಿದಂತೆ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ, ವಿವಿಧ ಇಲಾಖೆಗಳ ನೌಕರರ ಸಂ ಹಾಗೂ ಹೊರಗುತ್ತಿಗೆ ನೌಕರರ ಸಂದ ಪದಾಧಿಕಾರಿಗಳು ಬುಧವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಜಿಲ್ಲಾಧ್ಯ ಸುರೇಶ ಜೀಬಿ ಮಾತನಾಡಿ, ರಾಜ್ಯದ 7 ಕೋಟಿ ಜನತೆಗೆ ಅನ್ವಯವಾಗುವ ವಿವಿಧ ಯೋಜನೆಗಳನ್ನು ಜಾರಿಗೊಳಿಸಲು 7.73 ಲಕ್ಷ ಮಂಜೂರಾದ ಹುದ್ದೆಗಳ ಪೈಕಿ ಕಾರ್ಯನಿರ್ವಹಿಸುತ್ತಿರುವವರ ಸಂಖ್ಯೆ ಕೇವಲ 5.12 ಲಕ್ಷ ಮಾತ್ರ.

ರ್ತಿಯಾಗದೇ ಖಾಲಿ ಉಳಿದ ಹುದ್ದೆಗಳು 2.60 ಲಕ್ಷದಷ್ಟಿವೆ. ವೇತನ ಸೌಲಭ್ಯಗಳ ನಷ್ಟ ಮತ್ತು ಖಾಲಿ ಹುದ್ದೆಗಳ ಹೊರೆ ಹಾಲಿ ನೌಕರರ ಮೇಲೆ ಬಿದ್ದಿದೆ.

ಲ್ಲದೇ, ಸರ್ಕಾರಿ ವ್ಯವಸ್ಥೆಯಲ್ಲಿರುವ ಹುದ್ದೆಗಳನ್ನು ನಾಗರಿಕರಿಗೆ ಉತ್ತಮ ಸೇವೆ ನೀಡುವ ದೃಷ್ಟಿಯಿಂದ ರಸಿಕೊಂಡು ಜನಸಂಖ್ಯೆಯ ಆಧಾರದ ಮೇಲೆ ಹೆಚ್ಚಿನ ಹುದ್ದೆಗಳನ್ನು ಸೃಜಿಸಲು ಒತ್ತಾಯಿಸಲಾಗುತ್ತಿದೆ ಎಂದರು.

ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಬೇಕು. ಹಲವಾರು ವರ್ಷಗಳಿಂದ ರಾಜ್ಯದ ಎಲ್ಲಾ ಇಲಾಖೆಗಳಲ್ಲೂ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪರಿಷ್ಕರಿಸಿರುವುದಿಲ್ಲವಾದ್ದರಿಂದ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪರಿಷ್ಕರಿಸಿ, ಜೇಷ್ಠತಾ ಪಟ್ಟಿ ಸಿದ್ದಪಡಿಸಿ ಪದೋನ್ನತಿ ನೀಡಬೇಕು ಎಂದರು.

ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಚಂದ್ರಶೇಖರ ಎಚ್​. ಲೆಂಡಿ ಮಾತನಾಡಿ, ಹೊಸ ಪಿಂಚಣಿ ವ್ಯವಸ್ಥೆಯಿಂದಾಗಿ ಸರ್ಕಾರಿ ನೌಕರರಿಗೆ ಯಾವುದೇ ನಿಶ್ಚಿತ ಪ್ರಮಾಣದ ಪಿಂಚಣಿ ಸಿಗದೇ ಸಂಧ್ಯಾಕಾಲದಲ್ಲಿ ನೌಕರರ ಬದುಕು ಬೀದಿಗೆ ಬಿದ್ದಂತಾಗಿದೆ.

ನೌಕರರು ಮತ್ತು ಸರ್ಕಾರಗಳ ವಂತಿಕೆ ಹಣವನ್ನು ಷೇರು ಮಾರುಕಟ್ಟೆಯಲ್ಲಿ ಕಂಪನಿಗಳ ಭದ್ರತೆ ಒದಗಿಸಲು ತೊಡಗಿಸಿದಂತಾಗಿದೆ. ಆದ್ದರಿಂದ, ಎನ್​ಪಿಎಸ್​ ಪದ್ದತಿ ರದ್ದುಪಡಿಸಿ, ಹಳೆಯ ನಿಶ್ಚಿತ ಪಿಂಚಣಿ ವ್ಯವಸ್ಥೆ ಮರುಸ್ಥಾಪಿಸಲು ಸರ್ಕಾರವು ಆಶ್ವಾಸನೆ ನೀಡಿರುವಂತೆ ಕ್ರಮ ಕೈಗೊಳ್ಳಬೇಕಾಗಿದೆ ಎಂದರು.
ಮುಖಂಡ ಅಶೋಕ ಇಲಕಲ್​ ಮಾತನಾಡಿ, 7ನೇ ವೇತನ ಆಯೋಗದ ಶಿಫಾರಸ್ಸುಗಳು ಸ್ಪಷ್ಟವಾಗಿರದೇ ಗೊಂದಲದಿಂದ ಕೂಡಿದ್ದು, ನೌಕರರ ವೇತನ ಪ್ರಮಾಣವನ್ನು ಕಡಿತಗೊಳಿಸುವ ಕ್ರಮಗಳನ್ನು ಹೊಂದಿರುತ್ತವೆ.

7ನೇ ವೇತನ ಆಯೋಗದ ಪರಿಷ್ಕರಣೆಯನ್ನು 2022 ಜು.1ರಿಂದ ಕಾಲ್ಪನಿಕವಾಗಿ ಪರಿಗಣಿಸಿ, ನೌಕರರಿಗೆ ಮಧ್ಯಂತರ ಪರಿಹಾರವನ್ನು ನೀಡಿದ 2023 ಏ.1ರಿಂದ ಅನ್ವಯವಾಗುವಂತೆ ಆರ್ಥಿಕ ಲಾಭವನ್ನು ಪಾವತಿಸಲು ಹಾಗೂ ತುಟ್ಟಿಭತ್ಯೆ ದರವನ್ನು ಹಿಂದಿನ ಗುಣಾಂಕ 0.96 ರಂತೆಯೇ ಪರಿಗಣಿಸಿ ರಾಜ್ಯ ಸರ್ಕಾರವು ಆದೇಶಿಸುವುದು ವೈಜ್ಞಾನಿಕವಾದುದು.

ಅಲ್ಲದೇ, ಮನೆ ಬಾಡಿಗೆ ಭತ್ಯೆ, ಪ್ರಭಾರ ಭತ್ಯೆ, ಅಂಗವಿಕಲ ನೌಕರರ ಭತ್ಯೆ, ಸಮವಸ ಭತ್ಯೆ, ಕುಟುಂಬ ಯೋಜನೆ ಭತ್ಯೆ ಇತ್ಯಾದಿಗಳನ್ನು ಬೆಲೆ ಏರಿಕೆ ಮಟ್ಟಕ್ಕನುಗುಣವಾಗಿ ಹೆಚ್ಚಿಸಬೇಕಿದೆ ಎಂದರು.

ಮಹಿಳಾ ಸಂಚಾಲಕಿ ದಾಾಯಿಣಿ ಹುಡೇದ, ಬಿ.ಎಚ್​. ನಾಡಗಿರಿ, ನೀಲಮ್ಮ ಹಂದ್ರಾಳ, ಭಾರತಿ ನಿಪ್ಪಾಣಿ, ಸೋಮಪ್ಪ ಆಯಟ್ಟಿ, ಈರಣ್ಣ ಹೊಸಟ್ಟಿ, ಬಸವಂತ ಗುಣದಾಳ, ಗಾಜರೆ ವಡವಡಗಿ, ಬಿ.ಸಿ. ಗೋವರ್ದನ, ಆರ್​.ಆರ್​. ಮೆಣಸಗಿ, ಜಿ.ಬಿ. ಅಂಗಡಿ, ಅರ್ಜುನ ಕವಟೆಕರ್​ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net