‘ಸಂಪೂರ್ಣ ಬಂದ್’ ಆಡಿಯೋ ನಕಲಿ

DC Belgaum
Published on

ಬೆಳಗಾವಿ: ‘ಕರೊನಾ ಹಿನ್ನೆಲೆಯಲ್ಲಿ ಶನಿವಾರದಿಂದ ಸೋಮವಾರದವರೆಗೆ ದಿನಸಿ, ತರಕಾರಿ ಮಾರಾಟ ಸೇರಿ ಎಲ್ಲವೂ ಸಂಪೂರ್ಣ ಬಂದ್ ಆಗಲಿದೆ’ ಎಂಬ ಆಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅದು ನಕಲಿ ಆಡಿಯೋ ಎಂದು ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕರೊನಾ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಕೈಗೊಳ್ಳಲಾಗುವ ಪ್ರತಿಯೊಂದು ಕ್ರಮಗಳ ಕುರಿತು ಲಿಖಿತ ಆದೇಶ ಹೊರಡಿಸಲಾಗುತ್ತದೆ. ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಇಂತಹ ಅನಧಿಕೃತ ಮತ್ತು ಸುಳ್ಳು ಸುದ್ದಿಗಳನ್ನು ನಂಬಿ ಆತಂಕಕ್ಕೆ ಒಳಗಾಗಬಾರದು. ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಲಿಖಿತವಾಗಿ ಪ್ರಕಟಿಸುವ ನಿರ್ದೇಶನ ಅಥವಾ ಆದೇಶಗಳನ್ನು ಮಾತ್ರ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಜನತೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net