ಕ್ಷೇತ್ರ ಅಭಿವೃದ್ಧಿಗೆ ಪೂರ್ಣ ಪ್ರಮಾಣದಲ್ಲಿ ಸಹಕಾರ

ಗುಂಡ್ಲುಪೇಟೆ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಸಂಸದ ಸುನಿಲ್ ಬೋಸ್ ಮಾತನಾಡಿದರು. ಸಿದ್ದರಾಜು, ನಂಜುಂಡಪ್ರಸಾದ್, ಬೊಮ್ಮಯ್ಯ, ನವೀನ್, ಮಹೇಶ್, ಬಸವರಾಜು ಇದ್ದರು.
ಗುಂಡ್ಲುಪೇಟೆ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಸಂಸದ ಸುನಿಲ್ ಬೋಸ್ ಮಾತನಾಡಿದರು. ಸಿದ್ದರಾಜು, ನಂಜುಂಡಪ್ರಸಾದ್, ಬೊಮ್ಮಯ್ಯ, ನವೀನ್, ಮಹೇಶ್, ಬಸವರಾಜು ಇದ್ದರು.
Published on

ಗುಂಡ್ಲುಪೇಟೆ: ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಪೂರ್ಣ ಪ್ರಮಾಣದಲ್ಲಿ ಸಹಕಾರ ನೀಡಲಾಗುವುದು ಎಂದು ನೂತನ ಸಂಸದ ಸುನೀಲ್ ಬೋಸ್ ಭರವಸೆ ನೀಡಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಶಾಸಕ ಗಣೇಶ್ ಪ್ರಸಾದ್, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಶ್ರಮದಿಂದ ಹೆಚ್ಚಿನ ಬಹುಮತ ದೊರಕಿದ್ದು, ಮತದಾರರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಾಗುವುದು. ಜಿಲ್ಲೆಯಲ್ಲಿ ಕೆಲವರು ನನ್ನ ಬಗ್ಗೆ ನಿರಂತರವಾಗಿ ಮಾಡಿದ ಅಪಪ್ರಚಾರದಿಂದಾಗಿ ನಾನು ನಾಯಕನಾಗಿ ಬೆಳೆಯಲು ಸಾಧ್ಯವಾಯಿತು. ನಿಮ್ಮೆಲ್ಲರ ಸಹಕಾರದಿಂದ ಕ್ಷೇತ್ರವನ್ನು ಮಾದರಿಯನ್ನಾಗಿ ಮಾಡುವುದರೊಂದಿಗೆ ಕ್ಷೇತ್ರದ ಮತದಾರರ ಆಶೋತ್ತರಳಿಗೆ ಸ್ಪಂದಿಸುವುದಾಗಿ ತಿಳಿಸಿದರು.

ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಚಾಮರಾಜನಗರಕ್ಕೆ ಹೊಸ ರೈಲ್ವೆ ಯೋಜನೆಯನ್ನು ಅನುಷ್ಠಾನಗೊಳಿಸುವ ಕುರಿತು ಆಶಾಭಾವನೆ ವ್ಯಕ್ತಪಡಿಸಿದ ಸುನೀಲ್ ಬೋಸ್, ಈಗಾಗಲೇ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ. ಅವರೂ ಸಹ ಈ ವಿಚಾರದಲ್ಲಿ ಉತ್ಸುಕರಾಗಿದ್ದಾರೆ ಎಂದರು.

ಚಾಮುಲ್ ನಿರ್ದೇಶಕ ನಂಜುಂಡ ಪ್ರಸಾದ್, ಪುರಸಭಾ ಸದಸ್ಯರಾದ ಎನ್.ಕುಮಾರ್, ಅಣ್ಣಯ್ಯಸ್ವಾಮಿ, ಕಾರ್ಗಳ್ಳಿ ಸುರೇಶ್, ಕಣ್ಣಪ್ಪ, ಮಧುಸೂದನ್, ಮಾಜಿ ಸಂಸದ ಎ.ಸಿದ್ದರಾಜು, ಜಿಪಂ ಮಾಜಿ ಸದಸ್ಯರಾದ ಬಿ.ಕೆ.ಬೊಮ್ಮಯ್ಯ , ಕೆ.ಎಸ್.ಮಹೇಶ್, ಕೇರಳ್ಳಿ ನವೀನ್, ತಾಪಂ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು ಸೇರಿದಂತೆ ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net