ಕಲಿಯಂಡ ಕುಟುಂಬಸ್ಥರ ಸಂಪೂರ್ಣ ಸಹಕಾರ

    ಕೊಳಕೇರಿ ಗ್ರಾಮದ ಕಲಿಯಂಡ ಐನ್ ಮನೆಯಲ್ಲಿ ಕುಟುಂಬ ಅಭಿವೃದ್ಧ ಸಮಿತಿ ಸಂಘದ ಅಧ್ಯಕ್ಷ ಕಲಿಯಂಡ ವಿಜಯ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಕುಟುಂಬಸ್ಥರು ಉಪಸ್ಥಿತರಿದ್ದರು.
ಕೊಳಕೇರಿ ಗ್ರಾಮದ ಕಲಿಯಂಡ ಐನ್ ಮನೆಯಲ್ಲಿ ಕುಟುಂಬ ಅಭಿವೃದ್ಧ ಸಮಿತಿ ಸಂಘದ ಅಧ್ಯಕ್ಷ ಕಲಿಯಂಡ ವಿಜಯ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಕುಟುಂಬಸ್ಥರು ಉಪಸ್ಥಿತರಿದ್ದರು.
Published on

ನಾಪೋಕ್ಲು: ಅಖಿಲ ಕೊಡವ ಸಮಾಜ ನೇತೃತ್ವದಲ್ಲಿ ವಿವಿಧ ಕೊಡವ ಸಮಾಜ, ಸಂಘ ಸಂಸ್ಥೆಗಳು ಸೇರಿದಂತೆ ಕೊಡವ ಭಾಷಿಕ ಸಮುದಾಯಗಳು ಕುಟ್ಟದಿಂದ ಮಡಿಕೇರಿವರೆಗೆ ಕೈಗೊಡಿರುವ ಕೊಡವಾಮೆ ಬಾಳೋ ಪಾದಯಾತ್ರೆಯಲ್ಲಿ ಕಲಿಯಂಡ ಕುಟುಂಬಸ್ಥರು ಸಂಪೂರ್ಣ ಸಹಕಾರದೊಂದಿಗೆ ಭಾಗಿಯಾಗಲಿದ್ದಾರೆ ಎಂದು ಕಲಿಯಂಡ ವಿಜಯ ತಿಳಿಸಿದ್ದಾರೆ.

ಸಮೀಪದ ಕೊಳಕೇರಿ ಗ್ರಾಮದ ಕಲಿಯಂಡ ಐನ್ ಮನೆಯಲ್ಲಿ ಕುಟುಂಬ ಅಭಿವೃದ್ಧಿ ಸಂಘದ ನೇತೃತ್ವದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಫೆ.7ರಂದು ಮಡಿಕೇರಿಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಕುಟುಂಬ ಸದಸ್ಯರೆಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಲು ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವಿಜಯ ಹಾಗೂ ಕುಟುಂಬದ ಪ್ರಮುಖ ಪ್ರಕಾಶ್ ತಿಳಿಸಿದರು.

ಈ ಸಂದರ್ಭ ಅಭಿವೃದ್ಧಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net