ನಂಜುಂಡೇಶ್ವರ ದೇಗುಲದಲ್ಲಿ ಹುಣ್ಣಿಮೆ ಮಹೋತ್ಸವ

IMG-20240819-WA0211
Published on


ಆಲೂರು : ತಾಲೂಕಿನ ಕಸಬಾ ಹೋಬಳಿ ಸೊಂಪುರ ಗ್ರಾಮದ ಸಮೀಪದಲ್ಲಿರುವ ನಂಜದೇವರ ಕಾವಲಿನಲ್ಲಿ ಸುಕ್ಷೇತ್ರ ನಂಜುಂಡೇಶ್ವರ ದೇವಾಲಯದಲ್ಲಿ 52ನೇ ಹುಣ್ಣಿಮೆ ಮಹೋತ್ಸವ ಕಾರ್ಯಕ್ರಮ ನಡೆಯಿತು.


ಬೆಳಗಿನ ಜಾವದಿಂದಲೇ ದೇವಾಲಯ ಶುಚಿಗೊಳಿಸಿ ವಿವಿಧ ಹೂಗಳಿಂದ ಅಲಂಕರಿಸಿ ಪೂಜಾ, ವಿಧಿ,ವಿಧಾನಗಳು ನೆರವೇರಿಸಲಾಯಿತು. ದೇವರಿಗೆ ವಿವಿಧ ಅಭಿಷೇಕ ಮಾಡಲಾಯಿತು. ಮೂರ್ತಿಗೆ ವಿವಿಧ ಅಲಂಕಾರ ಮಾಡಲಾಗಿತ್ತು. ಮಹಾ ಮಂಗಳಾರತಿ ಮಾಡಿ ಭಕ್ತರಿಗೆ ತೀರ್ಪ ಪ್ರಸಾದ ಹಾಗೂ ಅನ್ನ ಸಂತರ್ಪಣೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net