ತಾರಿಮರ ಸರ್ಕಾರಿ ಪ್ರೌಢಶಾಲೆಗೆ ಪೂರ್ಣ ಫಲಿತಾಂಶ

5blrp2
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ತಾರೀಮರ ಶಾಲೆಯ ವಿದ್ಯಾರ್ಥಿಗಳೊಂದಿಗೆ ಶಿಕ್ಷಕರು.
Published on

ಬೇಲೂರು: ತಾಲೂಕಿನ ಬಿಕ್ಕೋಡು ಸಮೀಪದ ತಾರಿಮರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಬಂದಿದೆ.

2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ತಾರಿಮರ ಸರ್ಕಾರಿ ಪ್ರೌಢಶಾಲೆಯ 24 ವಿದ್ಯಾರ್ಥಿಗಳೂ ಹಾಜರಾಗಿದ್ದರು. ಒಬ್ಬ ವಿದ್ಯಾರ್ಥಿ ಡಿಸ್ಟಿಂಗ್ಸನ್ ಪಡೆದರೆ, ಪ್ರಥಮ ದರ್ಜೆಯಲ್ಲಿ-17, ದ್ವಿತೀಯ ದರ್ಜೆಯಲ್ಲಿ-6 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಿದ್ಯಾರ್ಥಿನಿ ಅಶ್ವಿನಿ.ಸಿ.ವೈ 540 ಅಂಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಎಲ್ಲ ವಿದ್ಯಾರ್ಥಿಗಳಿಗೂ ಮುಖ್ಯಶಿಕ್ಷಕ ಟಿ.ಕರಿಬಸಪ್ಪ ಮತ್ತು ಸಹ ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷ, ಸದಸ್ಯರು, ಪಾಲಕರು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net