ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಕೇಂದ್ರಕ್ಕೆ ಸಂಪೂರ್ಣ ಬೆಂಬಲ

minister sateesh jarakiholi
ಸಚಿವ ಸತೀಶ್ ಜಾರಕಿಹೊಳಿ
Published on

ಶಿವಮೊಗ್ಗ: ಭಯೋತ್ಪಾದನೆ ನಿಗ್ರಹದ ವಿಚಾರದಲ್ಲಿ ರಾಜಕೀಯ ಬದಿಗಿಟ್ಟು ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲವನ್ನು ಕಾಂಗ್ರೆಸ್ ನೀಡಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷ ನಡೆಯುತ್ತಿದ್ದು, ಸದ್ಯ ಉದ್ವಿಘ್ನ ವಾತಾವರಣ ನಿರ್ಮಾಣವಾಗಿದೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದೆ. ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ಕೈಗೊಳ್ಳುತ್ತದೆ ಎಂಬ ವಿಶ್ವಾಸವಿದೆ ಎಂದರು. ಎರಡು ದೇಶಗಳ ನಡುವೆ ನಡೆಯುತ್ತಿರುವ ಸಂಘರ್ಷ ರಾಜ್ಯದ ಮೇಲೆ ಪರಿಣಾಮ ಬೀರುವುದಿಲ್ಲ. ಸದ್ಯ ಸಂಘರ್ಷದ ಪರಿಣಾಮ ಪಂಜಾಬ್, ರಾಜಸ್ಥಾನ, ಜಮ್ಮು ಕಾಶ್ಮೀರದ ಮೇಲೆ ಕೇಂದ್ರೀತವಾಗಿದೆ. ಕರ್ನಾಟಕದ ಮೇಲೆ ಪರಿಣಾಮ ಬೀಳುವ ಸಾಧ್ಯತೆ ತುಂಬಾ ಕಡಿಮೆ ಇದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net