ಮಕ್ಕಳ ಶಿಕ್ಷಣಕ್ಕೆ ಹಣ ಬಳಿಸಿ

SIRIGERE PDO 31
Published on

ಸಿರಿಗೆರೆ: ಗೃಹಲಕ್ಷ್ಮಿ ಯೋಜನೆಯಡಿ ನೀಡುವ 2 ಸಾವಿರ ಹಣದಿಂದ ಮಕ್ಕಳಿಗೆ ಶಿಕ್ಷಣ, ಆರೋಗ್ಯ ಇನ್ನಿತರ ಒಳ್ಳೆಯ ಉದ್ದೇಶಗಳಿಗೆ ಬಳಸಬೇಕು ಎಂದು ಗ್ರಾಪಂ ಅಧ್ಯಕ್ಷೆ ಹಾಲಮ್ಮ ಬೈರಪ್ಪ ಸಲಹೆ ನೀಡಿದರು.

ಸಿರಿಗೆರೆ ನಾರದಮುನಿ ಸಮುದಾಯ ಭವನದಲ್ಲಿ ಬುಧವಾರ ಆಯೋಜಿಸಿದ್ದ ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಆದೇಶ ಪತ್ರ ವಿತರಿಸಿ ಮಾತನಾಡಿದರು.

ಮಹಿಳೆಯರು ಸ್ವಾವಲಂಬಿ ಬದುಕು ನಡೆಸಲು ಈ ಯೋಜನೆ ಸಹಕಾರಿ ಆಗಿದೆ. ಐದು ಗ್ಯಾರಂಟಿ ಯೋಜನೆಗಳು ಸಾಮಾನ್ಯ ಜನರನ್ನು ಮುಖ್ಯವಾಹಿನಿಗೆ ತರುವಂತದ್ದಾಗಿವೆ. ಇವುಗಳ ಸದ್ಬಳಕೆ ಜ್ಞಾನ ಬೆಳೆಸಿಕೊಳ್ಳಬೇಕು. ದುರುಪಯೋಗ ಮಾಡಿಕೊಳ್ಳಬಾರದು ಎಂದು ಮನವಿ ಮಾಡಿದರು.

ಪಿಡಿಒ ದೇವರಾಜ್ ಮಾತನಾಡಿ, ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳು ಸುದ್ದಿ ಹರಡುವುದು ಅಪರಾಧ ಆಗಲಿದೆ. ಆದ್ದರಿಂದ ಯೋಜನೆ ಕುರಿತು ಸಾಕಾರಾತ್ಮಕವಾಗಿ ಚಿಂತನೆ ಬೆಳೆಸಿಕೊಳ್ಳಬೇಕು. ಇದರಿಂದ ಕುಟುಂಬವು ಪ್ರಗತಿ ಸಾಧಿಸಲು ಸಹಕಾರ ಆಗಲಿದೆ ಎಂದರು.

ಮುಖಂಡರಾದ ಅನ್ಸಿರಾಬಾನು, ಗೀತಾ, ಶ್ರೀಧರ್, ಶಿವಮೂರ್ತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net