ಧರ್ಮಸ್ಥಳ ವಿರೇಂದ್ರ ಹೆಗ್ಗಡೆಯವರಿಂದ ಧನಸಹಾಯ

03raju4
Published on

ಚಾಮರಾಜನಗರ: ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಮಹಿಳೆಯ ಕಷ್ಟವನ್ನು ಅರಿತು ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀವಿರೇಂದ್ರ ಹೆಗ್ಗಡೆ ಧನಸಹಾಯ ಮಾಡಿದ್ದಾರೆ.

ತಾಲೂಕಿನ ಕಾಡಹಳ್ಳಿ ಗ್ರಾಮದ ನಿವಾಸಿ ರಾಜಮ್ಮ ಎಂಬುವವರು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿ ಬಹಳಷ್ಟು ಹಣ ಖರ್ಚು ಮಾಡಿದ್ದರು. ರಾಜಮ್ಮ ಕಷ್ಟದ ಪರಿಸ್ಥಿತಿಯನ್ನು ಧರ್ಮಸ್ಥಳ ಯೋಜನೆಯ ಕಾರ್ಯಕರ್ತರ ಮೂಲಕ ಧರ್ಮಾಧಿಕಾರಿ ಶ್ರೀ ವಿರೇಂದ್ರ ಹೆಗ್ಡೆ ಗಮನಕ್ಕೆ ತರಲಾಗಿತ್ತು. ಇದನ್ನು ಮನಗಂಡ ಧರ್ಮಾಧಿಕಾರಿಗಳು ಸುಮಾರು 35,000 ರೂ. ಸಹಾಯ ಧನ ಮಂಜೂರು ಮಾಡಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಹರೀಶ್ ಕುಮಾರ್ ಶೆಟ್ಟಿ ಮಂಜೂರಾತಿ ಪತ್ರವನ್ನು ರಾಜಮ್ಮ ಕುಟುಂಬಕ್ಕೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷ ರೂಪೇಶ್, ಗ್ರಾ,ಪಂ ಮಾಜಿ ಅಧ್ಯಕ್ಷ ಸಿದ್ದರಾಜು, ಮುಖಂಡ ನಾಗೇಶ್, ಮೇಲ್ವಿಚಾರಕಿ ಮಂಜುಳಾ, ಪ್ರಗತಿ ಬಂಧು ತಂಡದ ಸದಸ್ಯ ಬಸವಣ್ಣ, ಮೋಹನ್, ಸೇವಾಪ್ರತಿನಿಧಿ ಮಹಾಲಕ್ಷ್ಮಿ, ಸಹಾಯಕಿ ಶಾರದಾ ಹಾಗೂ ತಂಡದ ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net