

ಕುಂದಾಪುರ: ಕೋಡಿ ಪರಿಸರದ ಉಪ್ಪುನೀರು ಹಾವಳಿ ತಡೆಗೆ ತಡೆಗೋಡೆ ನಿರ್ಮಾಣಕ್ಕೆ ದೊಡ್ಡ ಪ್ರಮಾಣದ ಮೊತ್ತದ ಅವಶ್ಯವಿದ್ದು, ಸಣ್ಣ ನೀರಾವರಿ ಇಲಾಖೆಯವರಿಂದ ಕ್ರಿಯಾಯೋಜನೆ ತರಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದು ಕುಂದಾಪುರ ಸಹಾಯಕ ಕಮಿಷನರ್ ಮಹೇಶ್ಚಂದ್ರ ಕೆ. ಹೇಳಿದರು.
ಮಂಗಳವಾರ ಕೋಡಿ ಪರಿಸರಕ್ಕೆ ಭೇಟಿ ನೀಡಿ, ಉಪ್ಪು ನೀರಿನಿಂದ ಆಗುತ್ತಿರುವ ಸಮಸ್ಯೆ ಪರಿಶೀಲಿಸಿ ಮಾತನಾಡಿದರು. ಪುರಸಭೆ ಅಧ್ಯಕ್ಷ ಮೋಹನದಾಸ ಶೆಣೈ, ಪುರಸಭೆ ಉಪಾಧ್ಯಕ್ಷೆ ವನಿತಾ ಬಿಲ್ಲವ, ಮುಖ್ಯಾಧಿಕಾರಿ ಆನಂದ್ ಜೆ., ಸದಸ್ಯರು, ತಹಸೀಲ್ದಾರ್ ಮಲ್ಲಿಕಾರ್ಜುನ, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ರೂಪಾ ಮಾಡ, ಕಂದಾಯ ನಿರೀಕ್ಷಕ ದಿನೇಶ್, ಗ್ರಾಮ ಆಡಳಿತ ಅಧಿಕಾರಿ ಕಾಂತರಾಜು ಮೊದಲಾದವರು ಇದ್ದರು.