ವಾಲ್ಮೀಕಿ ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸಿ

Funds released for the construction of Valmiki Bhavan
ವಾಲ್ಮೀಕಿ ಸಮುದಾಯ ಭವನ ನಿರ್ಮಿಸಲು ಅನುದಾನ ಬಿಡುಗಡೆಗೊಳಿಸುವಂತೆ ಅಖಿಲ ಭಾರತೀಯ ವಾಲ್ಮಿಕಿ ಸಮಾಜ ಸೇವಾ ಸಂದ ಪದಾಧಿಕಾರಿಗಳು ವಿಜಯಪುರದಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್​ ಅವರಿಗೆ ಮನವಿ ಸಲ್ಲಿಸಿದರು. ಮಲ್ಲಿಕಾರ್ಜುನ ಬಟಗಿ ಮತ್ತಿತರರಿದ್ದಾರೆ.
Published on

ವಿಜಯಪುರ: ಜಿಲ್ಲಾ ಕೇಂದ್ರ ಸ್ಥಾನದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಿಸಲು ಅನುದಾನ ಬಿಡುಗಡೆಗೆ ವಿನಂತಿಸಿ ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಟಿ. ಭೂಬಾಲನ್​ ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆ ಸರ್ಕಾರ ಕಾರ್ಯದರ್ಶಿ ಡಿ. ರಂದೀಪ ಅವರಿಗೆ ದೂರವಾಣಿಯಲ್ಲಿ ವಿಷಯ ಪ್ರಸ್ತಾಪಿಸಿದ್ದು, ಜಿಲ್ಲಾಧಿಕಾರಿ ಕರೆಗೆ ಸಕಾರಾತ್ಮಕವಾಗಿ ಸ್ಪಂದಿಸಿ ಹಣ ಬಿಡುಗಡೆಗೊಳಿಸುವ ಭರವಸೆ ನೀಡಿದರು.

ಸಂದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net