

ಹಿರೇಕೆರೂರ: ತಾಲೂಕಿನ ತಾವರಗಿ ಗ್ರಾಮದಲ್ಲಿ ಹೃದಯಾಘಾತದಿಂದ ಮೃತಪಟ್ಟ ಯೋಧನ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ಗುರುವಾರ ಸಂಜೆ ಜರುಗಿತು.
ಗ್ರಾಮದ ಭರಮಗೌಡ ಶಂಕರಲಿಂಗಪ್ಪ ಹೊಸಮನಿ (39) ಹೃದಯಾಘಾತದಿಂದ ಬುಧವಾರ ಸಂಜೆ ನಿಧನರಾಗಿದ್ದರು. ಅವರ ಸ್ವಂತ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. ತಹಸೀಲ್ದಾರ್ ರಿಯಾಜುದ್ದಿನ್ ಬಾಗವಾನ್, ಸಿಪಿಐ ಮಂಜುನಾಥ ಪಂಡಿತ್, ಪಿಎಸ್ಐ ದೀಪಾ ಎಂ.ಟಿ. ಯೋಧನ ಪಾರ್ಥವ ಶರೀರಕ್ಕೆ ಹೂಗುಚ್ಛ ಅರ್ಪಿಸುವ ಮೂಲಕ ಅಂತಿಮ ನಮನ ಸಲ್ಲಿಸಿದರು. ನಂತರ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಗೌರವ ಸಲ್ಲಿಸಲಾಯಿತು. ಯೋಧನ ಕುಂಟುಂಬದವರು ಹಾಗೂ ಬಂಧುಗಳು ತಾವರಗಿ ಹಾಗೂ ಸುತ್ತಮುತ್ತಲಿನ ಗ್ರಾಮದ ಸಾವಿರಾರು ಜನರು ಪಾಲ್ಗೊಂಡಿದ್ದರು.