

ಬೆಳ್ತಂಗಡಿ: ಬೆಸ್ಟ್ ಫೌಂಡೇಶನ್ ವತಿಯಿಂದ ಚಾರ್ಮಾಡಿ ಸರ್ಕಾರಿ ಹಿರಿಯ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಪೀಠೋಪಕರಣವನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಹಸ್ತಾಂತರಿಸಿದರು.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಸನಬ್ಬ ಚಾರ್ಮಾಡಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ್ ಚಾರ್ಮಾಡಿ, ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಯಶೋಧರ್ ಚಾರ್ಮಾಡಿ, ಕಾರ್ಯದರ್ಶಿ ಕಿಶೋರ್, ಮುಖ್ಯಶಿಕ್ಷಕ ವೀರಯ್ಯ, ಪ್ರಮುಖರಾದ ಅಬ್ದುಲ್ ಮಜೀದ್, ನಿತಿನ್, ಹರಿಶ್ಚಂದ್ರ, ದಿನೇಶ್, ಬಾಲಕೃಷ್ಣ ಗೌಡ ತೋಟತ್ತಾಡಿ ಮೊದಲಾದವರಿದ್ದರು.