28ಕ್ಕೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಭವಿಷ್ಯ ನಿರ್ಧಾರ

dcc bank (4)
ಶಿವಮೊಗ್ಗ ಡಿಸಿಸಿ ಬ್ಯಾಂಕ್.
Published on

ಶಿವಮೊಗ್ಗ: ಡಿಸಿಸಿ(ಜಿಲ್ಲಾ ಸಹಕಾರ ಕೇಂದ್ರ) ಬ್ಯಾಂಕ್ ಅಧ್ಯಕ್ಷ ಎಂ.ಬಿ.ಚನ್ನವೀರಪ್ಪ ವಿರುದ್ಧ ಅವಿಶ್ವಾಸ ಮಂಡನೆಗೆ ದಿನಾಂಕ ನಿಗದಿಯಾಗಿದ್ದು, ಜು.28ರ ಮಧ್ಯಾಹ್ನ 12ಕ್ಕೆ ಸಭೆ ನಡೆಯಲಿದೆ. ಓರ್ವ ನಾಮನಿರ್ದೇಶಿತರೂ ಸೇರಿದಂತೆ ಒಟ್ಟು 12 ನಿರ್ದೇಶಕರ ಪೈಕಿ ಏಳು ನಿರ್ದೇಶಕರು ಅವಿಶ್ವಾಸ ಮಂಡನೆಗೆ ಅವಕಾಶ ನೀಡುವಂತೆ ಜು.6ರಂದು ಬ್ಯಾಂಕ್‌ನ ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ವಾಸುದೇವ್ ಅವರಿಗೆ ಮನವಿ ಸಲ್ಲಿಸಿದ್ದರು. ಇದೀಗ ಡಿಸಿಸಿ ಬ್ಯಾಂಕ್ ಬೆಳವಣಿಗೆ ರೋಚಕ ಘಟ್ಟ ತಲುಪಿದೆ. ಈ ಹಿಂದೆ ಬ್ಯಾಂಕ್‌ನ ಅಧ್ಯಕ್ಷರಾಗಿದ್ದ ಆರ್.ಎಂ.ಮಂಜುನಾಥಗೌಡ ನಿರ್ದೇಶಕ ಸ್ಥಾನದಿಂದ ವಜಾಗೊಂಡ ಬಳಿಕ ಚನ್ನವೀರಪ್ಪ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಈಗ ಬ್ಯಾಂಕ್‌ನ ಉಪಾಧ್ಯಕ್ಷ ಎಚ್.ಎಲ್.ಷಡಾಕ್ಷರಿ, ನಿರ್ದೇಶಕರಾದ ವಿಜಯದೇವ್, ಕೆ.ಪಿ.ದುಗ್ಗಪ್ಪ ಗೌಡ, ವೆಂಕಟೇಶ್, ಪರಮೇಶ್, ಎಸ್.ಪಿ.ದಿನೇಶ್ ಮತ್ತು ಜಿ.ಎನ್.ಸುಧೀರ್ ಮನವಿ ಪತ್ರಕ್ಕೆ ಸಹಿ ಹಾಕಿದ್ದರು.ಮನವಿ ಪತ್ರವನ್ನು ಬೆಂಗಳೂರು ಅಪೆಕ್ಸ್ ಬ್ಯಾಂಕ್ ಕಚೇರಿಯಲ್ಲಿರುವ ಸಕ್ಷಮ ಪ್ರಾಧಿಕಾರಕ್ಕೆ ಕಳುಹಿಸಲಾಗಿತ್ತು. ಈಗ ಅವಿಶ್ವಾಸ ಮಂಡನೆಗೆ ದಿನಾಂಕ ನಿಗದಿಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net