

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಮಕ್ಕಳ ಸಾಹಿತ್ಯಾಸಕ್ತ ಗೆಳೆಯರ ಬಳಗ, ಚಿಲಿಪಿಲಿ ಪ್ರಕಾಶನದ ಸಹಯೋಗದಲ್ಲಿ ಜಿ.ಬಿ. ಹೊಂಬಳ- 80ರ ಸಂಭ್ರಮ ಅಂಗವಾಗಿ ನ. 10ರಂದು ಸಂಜೆ 5.30 ಗಂಟೆಗೆ ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ರಾ.ಹ. ದೇಶಪಾಂಡೆ ಸಭಾಭವನದಲ್ಲಿ `ಶ್ರೀ ಜಿ.ಬಿ. ಹೊಂಬಳ ಮಕ್ಕಳ ಸಾಹಿತ್ಯ ರಾಜ್ಯ ಪ್ರಶಸ್ತಿ- 2024' ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಬಾಗಲಕೋಟೆಯ ಸಾಹಿತಿ ರಾಜಶೇಖರ ಕುಕ್ಕುಂದಾ ಅವರ `ಬಿಸಿ ಬಿಸಿ ಬಾತು' ಮಕ್ಕಳ ಕವನ ಸಂಕಲನಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಶಿವಮೊಗ್ಗದ ಹಿರಿಯ ಕವಯಿತ್ರಿ ಸವಿತಾ ನಾಗಭೂಷಣ ಪುಸ್ತಕ ಬಿಡುಗಡೆ ಮಾಡುವರು. ಸಂಘದ ಅಧ್ಯಕ್ಷ ಚಂದ್ರಕಾAತ ಬೆಲ್ಲದ ಅಧ್ಯಕ್ಷತೆ ವಹಿಸುವರು. ನಿವೃತ್ತ ಗ್ರಂಥಾಲಯ ಅಽಕಾರಿ ಜಿ.ಬಿ. ಹೊಂಬಳ, ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಹಾಗೂ ಮಕ್ಕಳ ಸಾಹಿತಿ ಡಾ. ಆನಂದ ಪಾಟೀಲ ಉಪಸ್ಥಿತರಿರುವರು