ಸಂಘದ ಅಧ್ಯಕ್ಷರಾಗಿ ಜಿ.ಸಿ.ಶಂಕರ್ ಆಯ್ಕೆ

Published on

ಮೈಸೂರು: ಮೈಸೂರು ಜಿಲ್ಲಾ ಪ್ರೌಢಶಾಲಾ ಮುಖ್ಯಶಿಕ್ಷಕ ಹಾಗೂ ಸಂಯುಕ್ತ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷರಾಗಿ ಪಿರಿಯಾಪಟ್ಟಣ ತಾಲೂಕು ಹಾರೋಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯ ಉಪಪ್ರಾಂಶುಪಾಲ ಜಿ.ಸಿ.ಶಂಕರ್ ಆಯ್ಕೆಯಾಗಿದ್ದಾರೆ.

ಮೈಸೂರು ತಾಲೂಕು ಹಂಚ್ಯಾ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಕುಮಾರ (ಪ್ರಧಾನ ಕಾರ್ಯದರ್ಶಿ), ಸಾಲಿಗ್ರಾಮ ತಾಲೂಕು ಅಂಕನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಸ್.ಸೋಮಶೇಖರ್(ಉಪಾಧ್ಯಕ್ಷ), ಜೆಎಲ್‌ಬಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ಉಪ ಪ್ರಾಂಶುಪಾಲ ಡಾ.ಡಿ.ಮಹೇಶ್ (ಖಜಾಂಚಿ), ಹುಣಸೂರು ತಾಲೂಕು ದೊಡ್ಡ ಹೆಜ್ಜೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಚಂದ್ರಶೇಖರ್ (ಸಂಘಟನಾ ಕಾರ್ಯದರ್ಶಿ), ನಂಜನಗೂಡು ತಾಲೂಕು ಕಪ್ಪಸೋಗೆ ಸರ್ಕಾರಿ ಪ್ರೌಢಶಾಲೆಯ ಎಸ್.ಬಾಲರಾಜು (ಸಹ ಕಾರ್ಯದರ್ಶಿ)ಯಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net