ನೀರು ಶುದ್ಧೀಕರಣ ಘಟಕಕ್ಕೆ ಜಿ.ಪಂ. ಸಿಇಒ ಭೇಟಿ

25 HPT 4
Published on

ಹೊಸಪೇಟೆ:ತಾಲೂಕಿನ ಪಾಪಿನಾಯಕನಹಳ್ಳಿ ನೀರು ಶುದ್ಧೀಕರಣ ಘಟಕಕ್ಕೆ ಜಿ.ಪಂ. ಸಿಇಒ ಸದಾಶಿವ ಪ್ರಭು ಬಿ. ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪಾಪಿನಾಯಕನಹಳ್ಳಿ ಒಳಗೊಂಡAತೆ ಒಟ್ಟು ಒಂಭತ್ತು ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಆಗುವ ಘಟಕದ ನಿರ್ವಹಣೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಯಾವುದೇ ಕಾರಣಕ್ಕೂ ನೀರು ಕಲುಷಿತಗೊಳ್ಳದಂತೆ ನಿರಂತರ ಎಚ್ಚರ ವಹಿಸಬೇಕು ಎಂದು ಸೂಚಿಸಿದ ಅವರು, ನಿಯಮಿತವಾಗಿ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸಬೇಕು ಎಂದು ಆದೇಶಿಸಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ವೀರೇಶ, ಸಹಾಯಕ ಅಭಿಯಂತರ ಸತೀಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net