ಜಿ.ಪಂ.ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

23adarshkdga1
Published on

ಮಡಿಕೇರಿ: ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯಲ್ಲಿ ಪ್ರಗತಿ ಕುಂಠಿಗೊಂಡಿದ್ದು ತ್ವರಿತವಾಗಿ ಪ್ರಗತಿ ಸಾಧಿಸುವಂತೆ ವಿವಿಧ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿ.ಪಂ.ಸಿಇಒ ವರ್ಣಿತ್ ನೇಗಿ ಸೂಚಿಸಿದರು.


ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಸಾಮರ್ಥ್ಯ ಸೌಧದಲ್ಲಿ ಬುಧವಾರ ಆಯೋಜಿಸಿದ್ದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.


ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯಲ್ಲಿ ಪ್ರಗತಿ ಕುಂಠಿಗೊಂಡಿದ್ದು ತ್ವರಿತವಾಗಿ ಪ್ರಗತಿ ಸಾಧಿಸಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಶೂನ್ಯ ಮಾನವ ದಿನಗಳ ಸೃಜನೆಯಾಗದಂತೆ ಕ್ರಮ ವಹಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಭಾರತ್ ನಿರ್ಮಾಣ್ ಸೇವಾ ಕೇಂದ್ರ, NRLM WORK SHED ಕಾಮಗಾರಿಗಳನ್ನು ಆರ್ಥಿಕ ವರ್ಷದಲ್ಲೆ ಪೂರ್ಣಗೊಳಿಸಬೇಕು. ಸ್ವಚ್ಚ ಭಾರತ್ ಮಿಷನ್ ಯೋಜನೆಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಕಸವನ್ನು ವ್ಯವಸ್ಥಿತವಾಗಿ ನಿರ್ವಹಿಸಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಹೇಳಿದರು.


ವಸತಿ ಯೋಜನೆಯಡಿ ತಾಲೂಕಿನಲ್ಲಿ ಮಳೆಗೆ ಹಾನಿಯಾದ ಮನೆಗಳ ಕುರಿತು ಮಾಹಿತಿ ಪಡೆದು ಪ್ರಗತಿ ಸಾಧಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಜಿ.ಪಂ.ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಕಾಲಮಿತಿ ಒಳಗೆ ಗ್ರಾಮ ಪಂಚಾಯಿತಿಗಳಲ್ಲಿ ಪ್ರಗತಿ ಸಾಧಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.


ಸಭೆಯಲ್ಲಿ ವಿರಾಜಪೇಟೆ ತಾ.ಪಂ.ಇಒ ಕೆ.ಸಿ.ಅಪ್ಪಣ್ಣ, ವಿರಾಜಪೇಟೆ/ ಪೊನ್ನಂಪೇಟೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ನರೇಗಾ ತಾಂತ್ರಿಕ ಸಿಬ್ಬಂದಿಗಳು ಹಾಗೂ ತಾ.ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net