

ಕಲಬುರಗಿ: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನಾವು ನಾಲ್ಕು ಸಾವಿರ ಕೋಟಿ ಎಂದಿದ್ದೇವು. ಆದರೆ ಶಾಸಕ ಬಸವರಾಜ ಯತ್ನಾಳ ೪೦ ಸಾವಿರ ಕೋಟಿ ರೂ. ಹಗರಣ ನಡೆದಿದೆ ಎಂದು ಹೇಳಿ, ನಮ್ಮ ಸರ್ಕಾರದ ಕೆಲಸ ಹಗುರ ಮಾಡಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು. ಅಕ್ರಮದ ಕುರಿತು ನಮಗೆ ತಪ್ಪು ಕಲ್ಪನೆ ಇತ್ತು. ಕೋವಿಡ್ ತನಿಖೆಯನ್ನು ಮಾಡುತ್ತಿದ್ದು, ಯತ್ನಾಳ ಹೇಳಿಕೆಯೂ ಪೂರಕವಾಗಿ ಶಕ್ತಿ ಕೊಟ್ಟಂತೆ ಆಗುತ್ತದೆ. ಅದನ್ನು ಪರಿಶೀಲಿಸಲಾಗುವುದು ಎಂದು ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಶಾಸಕ ಅಲ್ಲಮಪ್ರಭು ಪಾಟೀಲ್, ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರ, ಡಿಸಿಸಿ ಅಧ್ಯಕ್ಷ ಜಗದೇವ ಗುತ್ತೇದಾರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶರಣು ಮೋದಿ ಇತರರಿದ್ದರು.