ನಾಮನಿರ್ದೇಶಿತ ಸದಸ್ಯರಾಗಿ ಜಿ.ಶೇಖರ್ ಆಯ್ಕೆ

29M.D.R.1
ಗಂಗಾಪರಮೇಶ್ವರಿ ಮೀನುಗಾರರ ಸಹಕಾರ ಸಂಘದ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಪುರಸಭಾ ಮಾಜಿ ಅಧ್ಯಕ್ಷ ಜಿ.ಶೇಖರ್ ಅವರು ಶಾಸಕ ಕೆ.ಎಂ.ಉದಯ್ ಅವರನ್ನು ಅಭಿನಂದಿಸಿದರು.
Published on

ಮದ್ದೂರು: ಇಲ್ಲಿನ ಶ್ರೀ ಗಂಗಾಪರಮೇಶ್ವರಿ ಮೀನುಗಾರರ ಸಹಕಾರ ಸಂಘದ ಆಡಳಿತ ಮಂಡಳಿಗೆ ಶನಿವಾರ ನಾಮನಿರ್ದೇಶಿತ ಸದಸ್ಯರಾಗಿ ಪುರಸಭಾ ಮಾಜಿ ಅಧ್ಯಕ್ಷ ಜಿ.ಶೇಖರ್ ಆಯ್ಕೆಯಾದರು. ಈ ಹಿನ್ನೆಲೆಯಲ್ಲಿ ಅವರು ಶಾಸಕ ಕೆ.ಎಂ.ಉದಯ ಅವರನ್ನು ಅಭಿನಂದಿಸಿದರು.

ಜಿ.ಶೇಖರ್ ಮಾತನಾಡಿ, ತಾಲೂಕಿನಾದ್ಯಂತ ಮೀನುಗಾರರ ಸದಸ್ಯರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ದೊರಕಿಸಿಕೊಡುವ ಜತೆಗೆ ತಮ್ಮ ಅವಧಿಯಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಇಲಾಖೆ ಹಾಗೂ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ದೊರಕಿಸಿಕೊಡುವುದಾಗಿ ಭರವಸೆ ನೀಡಿದರು.

ಶ್ರೀ ಗಂಗಾಪರಮೇಶ್ವರಿ ಮೀನುಗಾರರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಸಿದ್ದಯ್ಯ, ಮುಖಂಡರಾದ ತೈಲೂರು ನವೀನ್, ಚಂದ್ರಣ್ಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net