

ಮಂಡ್ಯ: ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ 2025-26ನೇ ಸಾಲಿನ ದಸರಾ ಕ್ರೀಡಾಕೂಟದಲ್ಲಿ ತಾಲೂಕಿನ ಗೊರವಾಲೆ ಸರ್ಕಾರಿ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಜಿ.ವಿ.ಭುವನ್ ಐದು ಸಾವಿರ ಮೀಟರ್ ಓಟದಲ್ಲಿ ಪ್ರಥಮ ಹಾಗೂ 1,500 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆಯುವುದರೊಂದಿಗೆ ವಿಭಾಗಿಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಇದೇ ವಿದ್ಯಾರ್ಥಿ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲೂ 800 ಮೀಟರ್, 1,500 ಮೀಟರ್ ಹಾಗೂ 3,000 ಮೀಟರ್ ಓಟದಲ್ಲೂ ಪ್ರಥಮ ಸ್ಥಾನ ಪಡೆಯುವುದರೊಂದಿಗೆ ವೈಯಕ್ತಿಕ ಚಾಂಪಿಯನ್ ಆಗಿದ್ದನು. ಮುಂದಿನ ಕ್ರೀಡಾಕೂಟದಲ್ಲಿಯೂ ಉತ್ತಮ ಸಾಧನೆ ಮಾಡಲಿ ಎಂದು ಮುಖ್ಯಶಿಕ್ಷಕಿ ಯಮುನಾ, ದೈಹಿಕ ಶಿಕ್ಷಣ ಶಿಕ್ಷಕ ಕೆ.ಎಸ್.ರಾಮಸಂಜೀವಯ್ಯ, ಮುತ್ಯಾಲಪ್ಪ, ಹನುಮಂತ ಪೂಜಾರಿ, ಜಸಿನ್ತಾ ರೋಷಲಿನ್, ಶಂಕರ್, ಪ್ಲಾಸ್ಟಿಕ್ ವಿರೋಧಿ ಪರಿಸರ ಮಿತ್ರ ಜಯಶಂಕರ್ ಶುಭ ಹಾರೈಸಿದ್ದಾರೆ.